ಜೇವರ್ಗಿ: ಸ್ಥಳೀಯ ಬಿಜೆಪಿ ಮುಖಂಡನೊಬ್ಬ ತಲ್ವಾರ್ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲಾತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಎರಡು ದಿನಗಳ ಹಿಂದೆ ಜೇವರ್ಗಿ ಪಟ್ಟಣದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಮುಖಂಡ ಶರಣು ಕೋಳಕೂರ ಅವರು ಅಭಿಮಾನಿಗಳು ತಂದಿದ್ದ ಕೇಕ್ ತಲ್ವಾರ್ನಿಂದ ಕಟ್ ಮಾಡಿದ್ದಾರೆ. ಬಳಿಕ ಬೆಂಬಲಿಗರೊಂದಿಗೆ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಕಾರ್ಯಕ್ರಮದಲ್ಲಿ ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಅವರ ಸಹೋದರ ಬಸವರಾಜ ಪಾಟೀಲ್ ಸಹ ಪಾಲ್ಗೊಂಡಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಆದರೆ ಜೇವರ್ಗಿ ಪೊಲೀಸರು ಮಾತ್ರ ಇದರ ಬಗ್ಗೆ ಗೊತ್ತೆ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ.