ಸುರಪುರ: ಜಾಗತಿಕ ಲಿಂಗಾಯತ ಮಹಾಸಭಾ ಸುರಪುರ ತಾಲೂಕು ಘಟಕ ದಿಂದ ಶ್ರಾವಣ ಮಾಸದ ಅಂಗವಾಗಿ ಪ್ರತಿ ಸೋಮವಾರ ಅನುಭಾವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಅಧ್ಯಕ್ಷ ಶಿವರುದ್ರ ಉಳ್ಳಿ ತಿಳಿಸಿದರು.
ನಗರದ ಸತ್ಯಂಪೇಟೆಯಲ್ಲಿ ಈ ಕುರಿತು ಹೇಳಿಕೆ ನೀಡಿರುವ ಅವರು, ನಮ್ಮ ಸತ್ಯಂಪೇಟೆ ಗ್ರಾಮದಲ್ಲಿನ ಬಸವಮಾರ್ಗ ಪ್ರತಿಷ್ಠಾನದ ಅರಿವಿನ ಮನೆ ಆವರಣದಲ್ಲಿ (ಇಂದು) ಸೋಮವಾರ ಸಂಜೆ 6 ಗಂಟೆಗೆ ಮೊದಲನೇ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು,ಶರಣೆ ತಾಯಂದಿರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕೊಡೇಕಲ್ ದುರದುಂಡೇಶ್ವರ ಮಠದ ಶಿವಕುಮಾರ ಸ್ವಾಮೀಜಿಯವರು ಅನುಭಾವ ನೀಡಲಿದ್ದು,ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಅವರಿಗೆ ಶರಣ ಸನ್ಮಾನ ನೆರವೇರಿಸಲಾಗುವುದು.ನ್ಯಾಯವಾದಿ ಜಿ.ಎಸ್.ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ.ಸತ್ಯಂಪೇಟೆ ಗ್ರಾಮದ ಸಮಸ್ತ ಬಸವಾಭಿಮಾನಿಗಳು,ಹಿರಿಯರು ಹಾಗೂ ಎಲ್ಲ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಎಲ್ಲರು ಭಾಗವಹಿಸುವಂತೆ ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥ ಹಿರೇಮಠ,ನಾಗಭೂಷಣ ಯಾಳಗಿ,ನಿಂಗಣ್ಣ ಕೆಂಭಾವಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…