ಬಿಸಿ ಬಿಸಿ ಸುದ್ದಿ

ಹಸಿದ ಮಕ್ಕಳಿಗೆ ಹಾಲುಣಿಸಿ ಆರೋಗ್ಯವಂತ ಸಮಾಜ ನಿರ್ಮಿಸಿ

ಕಲಬುರಗಿ: ಹಸಿದ ಮಕ್ಕಳಿಗೆ ಹಾಲುಣಿಸುವ ಮೂಲಕ ಆ ಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ನಿಯಂತ್ರಿಸಬೇಕೆಂದು ಅಖಿಲ ಭಾರತ ಯುವಜನ ಫೆಡರೇಶನ್ (ಎಐವೈಎಫ್) ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಅಟ್ಟೂರ ಹೇಳಿದರು.

ನಗರದ ಸಂತೋಷ ಕಾಲನಿಯ ಕೆ ಎಚ ಬಿ ಗ್ರೀನ್ ಪಾರ್ಕ್ ಬಡಾವಣೆಯಲ್ಲಿ ಅಖಿಲ ಭಾರತ ಯುವಜನ ಫೆಡರೇಶನ್ ವತಿಯಿಂದ ನಾಗರ ಪಂಚಮಿ ಹಬ್ಬದ ನಿಮಿತ್ಯ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಮಾತನಾಡುತ್ತಾ ನಮ್ಮ ಭಾಗದಲ್ಲಿ ಮಕ್ಕಳು ಹಾಲಿಲ್ಲದೆ ಅಪೌಷ್ಟಿಕತೆಯಿಂದ ಬಳಲುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಕೇವಲ ಪಂಚಮಿ ಹಬ್ಬಕ್ಕೆ ಹಾಲು ಕುಡಿಸದೆ ಪ್ರತಿದಿನ ಬಡತನ, ನಿರ್ಗತಿಕರ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಬೇಕು. ಬಸವಣ್ಣನವರು ಹುತ್ತಿಗೆ ಹಾಲೆರದರೇನು ಫಲ? ಎಂಬ ವಚನದಲ್ಲಿ ಮೌಡ್ಯತೆಯನ್ನು ಮೀರಿ ಬೆಳೆಯಿತು ಆರೋಗ್ಯವಂತ ಸಮಾಜ ನಿರ್ಮಿಸಿಬೇಕೆಂದು ಹೇಳಿದ್ದಾರೆ.

ಕಾಣದ ದೇವರಿಗೆ ಕೈ ಮುಗಿಯುವುದಕ್ಕಿಂತ ಬಡತನ ನಿರ್ಗತಿಕ ಮಕ್ಕಳಲ್ಲಿ ದೇವರನ್ನು ಕಾಣಬೇಕೆಂದು ಮಾರ್ಮಿಕವಾಗಿ ಹೇಳಿದ್ದಾರೆ. ಅಂಥವರ ವಿಚಾರಧಾರೆಗಳನ್ನು ನಮ್ಮ ಜೀವನ ಅಳವಡಿಸಿಕೊಂಡು ಜೀವನ ಸಾಗಿಸಬೇಕೆಂದರು. ಆರೋಗ್ಯ ಇಲಾಖೆಯ ನಿವೃತ್ತ ಅಧಿಕಾರಿಯಾದ ಶಿವಪ್ಪ ಸುಲ್ತಾನಪುರ ಮಾತನಾಡುತ್ತಾ ಬುದ್ಧ, ಬಸವ, ಅಂಬೇಡ್ಕರ್ ಕೂಡ ಮೂಡನಂಬಿಕೆ ಹೋಗಲಾಡಿಸಲು ನಿರಂತರ ಶ್ರಮವಹಿಸಿ ತಮ್ಮ ಜೀವನವೇ ತ್ಯಾಗ ಮಾಡಿ ಅಮರರಾಗಿ ಉಳಿದಿದ್ದಾರೆ. ಇಂತಹ ಜನಜಾಗೃತಿ ಮೂಲಕ ಸಮಾಜ ಬದಲಾವಣೆ ಆಗಲೆಂದರು.

ಮಹಿಳಾ ಮುಖಂಡರಾದ ಮಹಾನಂದ ಪಾಟೀಲ ಮಾತನಾಡುತ್ತಾ ಈ ಕಾರ್ಯಕ್ರಮದಲ್ಲಿ ಯಾವುದೇ ಜಾತಿ, ಮತ ಅನ್ನದೆ ಎಲ್ಲರೂ ಜೊತೆಗೂಡಿ ನಾಗರ ಪಂಚಮಿ ಹಬ್ಬ ಮಕ್ಕಳಿಗೆ ಹಾಲುಣಿಸುವ ಮೂಲಕ ಆಚರಣೆ ಮಾಡುತ್ತಿರುವುದು ಬಹಳ ಹೆಮ್ಮೆಯ ವಿಷಯ. ಇಂತಹ ಕಾರ್ಯಕ್ರಮಗಳಿಂದ ವಿಶೇಷವಾಗಿ ಮಹಿಳೆಯರು ಜಾಗೃತರಾಗಲಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಿದ್ರಾಮಪ್ಪ ಬಾಬನಗೋಳ, ರೇಖಾ ಬಿರಾದಾರ, ನಿಲೋಫರ, ಪ್ರೀತಿ ಹೂಗಾರ, ಮಮತಾ ಪವಾರ, ನಂದೀಶ ಹೂಗಾರ, ಅಸ್ಲಾಂ ಶೇಖ, ಶಬನಾ ಶೇಖ, ಸಂಜೀವ ಕುಮಾರ ಸಲಗರ, ಮೋಹನರಾಜ ಕಲ್ಲೂರ ಕರ, ರಾಜು ಹಾಸನ, ರಾಜಕುಮಾರ ಬಿರಾದಾರ, ಲಲಿತಾ ಬಿರಾದಾರ ಸೇರಿದಂತೆ ಅನೇಕ ಜನ ಪಾಲ್ಗೊಂಡಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

33 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago