SHG ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ; ಉಮಾ ಮಹಾದೇವನ್ ಕರೆ

0
8

ಬೆಂಗಳೂರು; ಇಂದು ಬೆಂಗಳೂರಿನ ಪಂಚಾಯತ್ ರಾಜ್ ಆಯುಕ್ತಾಲಯದ ಉಪಗ್ರಹ ಆಧಾರಿತ ಕೇಂದ್ರದಲ್ಲಿ ಮಹಿಳಾ ಸ್ವಾವಲಂಬನೆಗಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ಎಲ್ಲಾ ಸ್ವ ಸಹಾಯ ಗುಂಪಿನ ಅರ್ಹ ಮಹಿಳೆಯರಿಗೆ ಒದಗಿಸುವ ಸಲುವಾಗಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆ ರಾಜ್ಯ ಮಟ್ಟದ ಉಪಗ್ರಹ ಆಧಾರಿತ ತರಬೇತಿ ಕಾರ್ಯಕ್ರಮವನ್ನು ಗಿಡಕ್ಕೆ ನೀರನ್ನು ಹಾಕುವ ಮೂಲಕ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಚಾಲನೆ ನೀಡಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳು ನಮ್ಮೆಲ್ಲಾ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ಪಡೆಯುವ ಮೂಲಕ ಕಟ್ಟ ಕಡೆಯ ಮಹಿಳೆಯರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಕರೆ ನೀಡಿದರು.

Contact Your\'s Advertisement; 9902492681

ಮಹಿಳಾ ಸ್ವಾವಲಂಬನೆ ಯೋಜನೆಗಳ ಕುರಿತು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕಿ ಡಾ. ರಾಗಪ್ರಿಯಾ ಆರ್ ಪ್ರಾಸ್ತಾವಿಕ ಮಾತನಾಡಿ, ಗ್ಯಾರಂಟಿ ಯೋಜನಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನ ಭಾಗ್ಯ ಯೋಜನೆ, ಯುವ ನಿಧಿ ಯೋಜನೆಗಳ ಬಗ್ಗೆ ಸ್ವಸಹಾಯ ಗುಂಪಿನ ಎಲ್ಲಾ ಮಹಿಳೆಯರಿಗೂ ಈ ತರಬೇತಿ ಅನುಕೂಲಕರವಾಗಲಿದೆ ಎಂದರು.

ಅಲ್ಲದೆ ಸಂಬಂಧ ಪಟ್ಟ ಇಲಾಖಾ ಯೋಜನೆಗಳ ಬಗ್ಗೆ ಅಧಿಕಾರಿಗಳು ಮಾಹಿತಿಯನ್ನು ನೀಡಿದರು. ಅಪರ ಅಭಿಯಾನ ನಿರ್ದೇಶಕರಾದ ಅನುಪಮಾ ಸ್ವಾಗತಿಸಿ, ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here