ಧಾರ್ಮಿಕ ಆಚರಣೆಯ ನೇಪದಲ್ಲಿ ಪೌಷ್ಠಿಕಯುತ ಹಾಲು ವ್ಯರ್ಥಮಾಡಬೆಡಿ: ನಾಗೇಂದ್ರ ಕೆ ಜವಳಿ

ಕಲಬುರಗಿ; ನಗರದ ಪಂಚಶೀಲ ನಗರದಲ್ಲಿ ಹಿಂದಿನ ಕಾಲದಿಂದಲೂ ಅವೈಜ್ಞಾನಿಕವಾಗಿ ಆಚರಿಸಿಕೊಂಡು ಬರುತ್ತಿದ್ದ ನಾಗರ ಪಂಚಮಿ ಬದಲಾಗಿ ಇಂದು ಮಾನವ ಬಂಧುತ್ವ ವೇದಿಕೆ ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಬಸವ ಪಂಚಮಿಯಾಗಿ ಆಚರಿಸಲಾಯಿತು ಈ ಕಾರ್ಯಕ್ರಮ ಉದ್ದೇಶಿಸಿ ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಲಕರಾದ ನಾಗೇಂದ್ರ ಕೆ ಜವಳಿಯವರು ಮಕ್ಕಳಿಗೆ ಹಾಲು ವಿತರಿಸುವ ಮೂಲಕ ಹಾಲು ಹಾವಿನ ಆಹಾರವಲ್ಲ ಬದಲಾಗಿ ಹಾಲು ಹಾವಿನ ಜೀವಹಾನಿ ಮಾಡುತ್ತದೆ ಹಾವು ಮಾಂಸಹಾರಿ. ಇದೆ ಹಾಲು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡುವ ಬದಲಿಗೆ ಹುತ್ತಕ್ಕೆ ಹಾಗೂ ಕಲ್ಲಿನ ಮೇಲೆ ಹಾಲೇರಿವ ಮೂಲಕ ಈ ದಿನ ಮೌಢ್ಯದ ಹೆಸರಿನಲ್ಲಿ ಸಾವಿರಾರು ಲಿಟರ್ ಹಾಲು ಹಾಳು ಮಾಡಲಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

ನಗರ ಪ್ರದೇಶದ ಜನರು ವಿದ್ಯಾವಂತರಾಗಿಯೂ ಹಾಲನ್ನು ಕಲ್ಲಿನ ನಾಗರ ಮೂರ್ತಿಯ ಮೇಲೆ ಚೆಲ್ಲಿ ವ್ಯರ್ಥ ಮಾಡುವಲ್ಲಿ ತೊಡಗಿಸಿಕೊಳ್ಳುತ್ತಿರುವುದು ದುರಂತದ ಸಂಗತಿಯಾಗಿದೆ. ಹಳ್ಳಿಗಾಡಿನ ಜನರಂತೆ ಪಂಚಮಿ ಹಬ್ಬದ ಮೂಲ ಉದ್ದೇಶಕ್ಕೆ ಚ್ಯುತಿ ತರಲಾರದೆ ಅರ್ಥಪೂರ್ಣವಾಗಿ ಆಚರಿಸುವಲ್ಲಿ ನಗರವಾಸಿಗಳು ವಿಫಲರಾಗುತ್ತಿರಲು ಕಾರಣ ಇವರು ಪುರೋಹಿತμÁಹಿಗಳು ಬಿತ್ತುವ ಮೌಢ್ಯಕ್ಕೆ ಬಹುಬೇಗ ಬಲಿಯಾಗುತ್ತಿರುವುದು. ಹಾಲು ಸಸ್ತಿನಿ ಪ್ರಾಣಿಗಳ ರಕ್ತದಿಂದ ಉತ್ಪತ್ತಿಯಾಗುವ ಒಂದು ಪ್ರಾಣಿಜನ್ಯ ಪೌಷ್ಠಿಕ ಜಲ ಆಹಾರ. ಹಾಲು ಮನುಷ್ಯ ಹಾಗು ಆಯಾ ಸಸ್ತಿನಿಗಳ ಶಿಸುಗಳಿಗೆ ಉಪಯೋಗವಾಗುವ ಆಹಾರ. ಆದರೆ ಜೀವಂತ ಹಾವುಗಳು ಹಾಲನ್ನು ಕುಡಿಯುವುದಿಲ್ಲ. ಹಾವು ಒಂದು ಮಾಂಸಾಹಾರಿ ಪರಿಸೃಪ (ಕಾರ್ನಿಯೋರಸ್ ರೆಪ್ಟೈಲ್) ಆಗಿದ್ದು ಹಾಲಿನಲ್ಲಿರುವ ಅಧಿಕ ಕ್ಯಾಲ್ಸಿಯನ್ ಅಂಶ ಜೀರ್ಣಿಸಿಕೊಳ್ಳುವ ಕಿಣ್ವಗಳ ವ್ಯವಸ್ಥೆ ಹಾವಿನ ದೇಹದಲ್ಲಿ ಇಲ್ಲ. ಹಾಗಾಗಿ ಒಂದು ವೇಳೆ ಹಾವು ಹಾಲನ್ನು ಸೇವಿಸಿದರೂ ಅದಕ್ಕೆ ಲಾಭಕ್ಕಿಂತ ಹಾನಿಯೆ ಹೆಚ್ಚು ಎನ್ನುವುದು ಅನೇಕ ತಜ್ಞ ಪಶುವೈದ್ಯರ ಅಭಿಪ್ರಾಯವಾಗಿದೆ.

ಹಾಗಾಗಿ ಜೀವಂತ ಹಾವಿಗಾಗಲಿ ನಿರ್ಜೀವ ಕಲ್ಲಿಗಾಗಲಿ ಅಮೂಲ್ಯ ಪೌಷ್ಟಿಕ ಆಹಾರವಾಗಿರುವ ಹಾಲನ್ನು ಚೆಲ್ಲಿ ವ್ಯರ್ಥ ಮಾಡುವುದು ನಾಗರಿಕರ ಲಕ್ಷಣವಂತೂ ಖಂಡಿತ ಅಲ್ಲ. ಮನುಷ್ಯ ತನ್ನ ಬುದ್ದಿವಂತಿಕೆˌ ವಿವೇಚನಾ ಶಕ್ತಿಯನ್ನು ಉಪಯೋಗಿಸಬೇಕು. ಸಾಂಪ್ರದಾಯವಾದಿಗಳು ಬಿತ್ತಿದ ಮೌಢ್ಯಗಳಿಂದ ಹೊರಬರಬೇಕು. ಇಂದಿಗೂ ದೇಶದ ಅಸಂಖ್ಯಾತ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ದೇಶವು ಜಾಗತಿಕ ಹಸಿವಿನ ಸ್ಯೂಚಾಂಕದಲ್ಲಿ ಬಹಳ ಹೀನಾಯ ಸ್ಥಿತಿಯಲ್ಲಿದೆ. ಇಂತದ್ದರಲ್ಲಿ ದೇಶದ ಪ್ರಜ್ಞಾವಂತ ನಾಗರಿಕರು ಧಾರ್ಮಿಕ ಮೌಢ್ಯಗಳಿಗೆ ಬಲಿಯಾಗಬಾರದು. ಪಂಚಮಿ ಹಬ್ಬದಂದು ಕಲ್ಲಿನ ನಾಗರಕ್ಕೆ ಹಾಲೇರೆದು ವ್ಯರ್ಥ ಮಾಡುವ ಬದಲಿಗೆ ಅದೇ ಹಾಲನ್ನು ಅನಾಥಾಶ್ರಮದ ಅಥವಾ ಬಡ ವಿದ್ಯಾರ್ಥಿಗಳಿರುವ ವಸತಿ ಗೃಹ ಅಥವಾ ಶಾಲೆಗಳ ಮಕ್ಕಳಿಗೆ ವಿತರಿಸುವ ಮೂಲಕ ಪಂಚಮಿ ಹಬ್ಬವನ್ನು ಮಹಾ ಮಾನವತಾವಾದಿˌ ವೈಚಾರಿಕ ಪ್ರಾವಾದಿ ಬಸವಣ್ಣನವರ ಚಿಂತನೆಗಳಿಗೆ ಗೌರವ ಸಮರ್ಪಿಸಿ ಈ ಹಬ್ಬವನ್ನು ಬಸವ ಪಂಚಮಿ ಹಬ್ಬವಾಗಿ ಆಚರಿಸಬೇಕು.

ಈ ದಿಶೆಯಲ್ಲಿ ಪ್ರತಿವರ್ಷ ಮಾನವ ಬಂಧುತ್ವ ವೇದಿಕೆಯು ಪ್ರಶಂಸನಾರ್ಹ ಕಾರ್ಯ ಮಾಡುತ್ತಿದೆ. ರಾಜ್ಯಾದ್ಯಂತ ವೇದಿಕೆಯ ಕಾರ್ಯಕರ್ತರು ಬಸವ ಪಂಚಮಿ ಕುರಿತು ಶಾಲಾ ವಿದ್ಯಾರ್ಥಿಗಳುˌ ಹಾಗು ಸಾಮಾನ್ಯ ನಾಗರಿಕರಲ್ಲಿ ಜಾಗೃತೆ ಮೂಡಿಸುವ ಅನೇಕ ಬಗೆಯ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅದರಂತೆ ವಿವಿಧ ಬಸವಪರ,ದಲಿತಪರ್,ಪ್ರಗತಿಪರ್ ಸಂಘಟನೆಗಳು ಕೂಡ ಜನರಲ್ಲಿನ ಮೌಢ್ಯಗಳನ್ನು ನಿವಾರಿಸುವ ಕಾರ್ಯ ಮಾಡುವ ಅಗತ್ಯ ಇಂದು ತುಂಬಾ ಇದೆ. ಹಾಗಾಗಿ ಮಾನವ ಬಂಧುತ್ವ ವೇದಿಕೆ ಹಾಗು ಸಂಘಟನೆಗಳು ಒಟ್ಟಾಗಿ ಸಮಾಜದಲ್ಲಿ ಬೇರೂರಿರುವ ವೈದಿಕ ಮೌಢ್ಯಗಳನ್ನು ಹೋಡೆದೋಡಿಸಲು ಕಾರ್ಯಯೋಜನೆಯನ್ನು ರೂಪಿಸುವ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾ ಸಂಚಲಕರಾದ ನಾಗೇಂದ್ರ ಕೆ ಜವಳಿ, ನ್ಯಾಯವಾದಿ ಶ್ರಾವಣ ಕುಮಾರ ಮೊಸಲಗಿ, ಸ್ಲಂ ಜನಾಂದೊಲನ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ, ಉಪಾಧ್ಯಕ್ಷರಾದ ಗೌರಮ್ಮ ಮಾಕ, ಪ್ರ. ಕಾರ್ಯದರ್ಶಿ ಹೀನಾ ಶೆಖ್, ಗಾಯಕ ಶ್ರಿಧರ್ ಹೊಸಮನಿ, ಬಾಗ್ಯವಂತ ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420