ಕಲಬುರಗಿ; ಕಲಬುರಗಿ ಪೀಠ ಸೇರಿದಂತೆ ರಾಜ್ಯ ಹೈಕೋರ್ಟ್ ನಲ್ಲಿ ಸರ್ಕಾರದ ವಿರುದ್ಧ ದಾಖಲಾದ ಹೈಕೋರ್ಟ್ ನಿಂದನಾ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಕಾಲದಲ್ಲಿ ನ್ಯಾಯಾಲಯಕ್ಕೆ ನ್ಯಾಯಾಲಯದ ಆದೇಶ ಪಾಲನೆ ಮಾಡುತ್ತಿರುವ ಬಗ್ಗೆ ಅಫಿಡೇವಿಟ್ ಸಲ್ಲಿಸಿ ಪ್ರಕರಣ ಮುಕ್ತಾಯಕ್ಕೆ ಮುಂದಾಗಬೇಕು ಎಂದುಬಅಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಸೂಚಿಸಿದರು.
ಸೋಮವಾರ ತಮ್ಮ ಕಚೇರಿಯಲ್ಲಿ ಕಲಬುರಗಿ ಹೈಕೋರ್ಟ್ ಪೀಠದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರ್ಚನಾ ತಿವಾರಿ
ಅವರೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಉಚ್ಛ ನ್ಯಾಯಾಲಯದಲ್ಲಿ ಜಿಲ್ಲೆಗೆ ಸಂಬಂಧಿಸಿದ ಪ್ರಕರಣಗಳ ಕುರಿತು ಚರ್ಚೆ ನಡೆಸಿ, ನಿಂದನಾ ಪ್ರಕರಣಗಳಲ್ಲಿ ಒಂದು ನ್ಯಾಯಾಲಯದ ಅದೇಶ ಪಾಲಿಸಬೇಕು. ಅದು ಕಾರ್ಯಸಾಧು ಇಲ್ಲದಿದ್ದಲ್ಲಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕು ಎಂದರು.
ಪ್ರತಿ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳನ್ನು ಪ್ರತಿವಾದಿಯಲ್ಲಿ ಸೇರಿಸಿ ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಪ್ರತಿ ದಿನ ಹತ್ತಾರು ಸಭೆ, ವಿಡಿಯೋ ಕಾನ್ಪೆರೆನ್ಸ್ ನಲ್ಲಿ ಭಾಗವಹಿಸಬೇಕಾಗುತ್ತದೆ. ಹೀಗಾಗಿ ಆಯಾ ಪ್ರಕರಣಗಳಿಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ಸತತವಾಗಿ ಹೈಕೋರ್ಟಿನ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮತ್ತು ಸರ್ಕಾರಿ ವಕೀಲರನ್ನು ಸಂಪರ್ಕಿಸಿ ಕಂಡಿಕೆವಾರು ಉತ್ತರ ಸಲ್ಲಿಸುವ ಮೂಲಕ ಪ್ರಕರಣಗಳನ್ನು ಬೇಗ ಇತ್ಯರ್ಥಕ್ಕೆ ಸಹಕರಿಸಬೇಕು ಎಂದರು.
ನ್ಯಾಯಾಲಯದಲ್ಲಿನ ನಿಂದನಾ ಪ್ರಕರಣಗಳ ತ್ವರಿತ ವಿಲೇವಾರಿಗೆ ಜಿಲ್ಲಾ ಮಟ್ಟದಲ್ಲಿ ಪ್ರತಿ ಇಲಾಖೆಯಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಇವರು ಸರ್ಕಾರಿ ವಕೀಲರೊಂದಿಗೆ ಸಮನ್ವಯತೆ ಸಾಧಿಸಬೇಕು. ಈ ಕುರಿತು ಅಗತ್ಯ ಸಲಹೆ ಬೇಕಾದಲ್ಲಿ ಡಿ.ಸಿ. ಕಚೇರಿಯಲ್ಲಿರುವ ಕಾನೂನು ಸಲಹೆಗಾರರ ನೆರವು ಪಡೆಯಿರಿ ಎಂದರು.
ಸಹಾಯಕ ಆಯುಕ್ತೆ ಮಮತಾ ಕುಮಾರಿ, ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಪಾರ್ವತಿ, ಆಹಾರ ಇಲಾಖೆ ಉಪನಿರ್ದೇಶಕ ಶಾಂತಗೌಡ ವಿ. ಗುಣಕಿ, ಶಾಲಾ ಶಿಕ್ಷಣ (ಪದವಿ ಪೂರ್ವ) ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಸೇರಿದಂತೆ ಜಿಲ್ಲಾ ಮಟ್ಟದ ಇತರೆ ಅಧಿಕಾರಿಗಳು ಇದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…