ಆಳಂದ: ತಾಲೂಕಿನ ಮಾದನಹಿಪ್ಪರಗಾದಲ್ಲಿ ಅ.22ರಂದು ಬೆಳಗಿನ 10:30ಕ್ಕೆ ಸರಸಂಬಾದ ಶ್ರೀ ಧನಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ (ನಿ).ದ ಮಾದನಹಿಪ್ಪರಗಾ 5ನೇ ಶಾಖೆ ಉದ್ಘಾಟನೆ ಹಾಗೂ 21ನೇ ವರ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಲಿದೆ ಎಂದು ಸೌಹಾರ್ದ ಸಂಘದ ಅಧ್ಯಕ್ಷ ಮಹಾಂತಪ್ಪ ಎಸ್. ಆಲೂರೆ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾದನಹಿಪ್ಪರಗಾ ಗ್ರಾಮದ ಶ್ರೀ ಶಿವಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುವ ಸಮಾರಂಭದ ಸಾನ್ನಿಧ್ಯವನ್ನು ಗ್ರಾಮದ ಶ್ರೀ ಶಿವಲಿಂಗೇಶ್ವರ ವಿರಕ್ತ ಮಠದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ನೇತೃತ್ವವನ್ನು ಗುರುಶಾಂತೇಶ್ವರ ಹಿರೇಮಠದ ಶ್ರೀ ಶಾಂತವೀರ ಶಿವಾಚಾರ್ಯರು ವಹಿಸುವರು. ಸಮಾರಂಭ ಹಾಗೂ ಶಾಖೆಯ ಉದ್ಘಾಟನೆಯನ್ನು ಕೋತಲಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಯ ಸಂರಕ್ಷಕ ಬಸವರಾಜ ಪಾಟೀಲ ಸೇಡಂ ಅವರು ನೆರವೇರಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸುಭಾಷ ಗುತ್ತೇದಾರ, ಕಲಬುರಗಿ ಕೆವೈಎಇಸಿಸಿ ಬ್ಯಾಂಕ್ ಅಧ್ಯಕ್ಷ ಸುರೇಶ ಸಜ್ಜನ್, ಬೆಂಗಳೂರಿನ ಸೌಹಾರ್ದ ನಿರ್ದೇಶಕಿ ಶೈಲಜಾ ತಪ್ಪಲಿ, ಉಪನಿಬಂಧಕಿ ಮಂಜುಳಾ, ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮುಳೆಗಾಂವ, ಕಲಬುರಗಿ ಸಿದ್ಧಿ ವಿನಾಯಕ ಸೌಹಾರ್ದ ಸಂಘದ ಅಧ್ಯಕ್ಷ ಸಂಜೀವ ಮಹಾಜನ್, ಪ್ರಾಂತೀಯ ವ್ಯವಸ್ಥಾಪಕ ಸೂರ್ಯಕಾಂತ ರ್ಯಾಕಲೆ, ಗ್ರಾಪಂ ಅಧ್ಯಕ್ಷೆ ಸುವರ್ಣ ಈ. ಮೈಂದರ್ಗಿ ಆಗಮಿಸಲಿದ್ದಾರೆ.
ಇದೇ ವೇಳೆ ದುಡಿಯುವರ ಅಭಿವೃದ್ಧಿ ಸ್ವಾವಲಂಬನೆ ಬದುಕು ಕುರಿತು ನಿವೃತ್ತ ಪ್ರಾಚಾರ್ಯ ಡಾ. ನರೇಂದ್ರ ಬಡಶೇಷಿ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ಶ್ರೀಧನಲಕ್ಷ್ಮೀ ಸೌ.ಸ.ಸಂಘದ ಅಧ್ಯಕ್ಷ ಮಹಾಂತಪ್ಪ ಆಲೂರೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭಕ್ಕೆ ಸಭೆಗೆ ಸರ್ವ ಸದಸ್ಯರು ಹಾಜರಾಗಬೇಕು ಎಂದು ಅವರು ಕೋರಿದ್ದಾರೆ.
ಅಲ್ಲದೆ, ಸಂಘದ ಉಪಾಧ್ಯಕ್ಷ ಸೋಲಿಂಗ ಎಸ್. ಕವಲಗಿ, ನಿರ್ದೇಶಕರಾದ ಸೂರ್ಯಕಾಂತ ಎಂ. ಪಾಟೀಲ, ಶ್ರೀಕಾಂತ ಬಿ. ದೇಶಟ್ಟಿ, ಜಗನಾಥ ದೇಶಮುಖ, ವಿಜಯನಂದ ಕೆ. ಮಾಶಾಳೆ, ಮಲ್ಲಿನಥ ಕೆ. ಗೋವಿನ, ಕುಪೇಂದ್ರ ವಿ. ಪಾಟೀಲ, ಬೆನಕಪ್ಪ ಎ. ಸೊಸಟ್ಟಿ, ವಿಠ್ಠಲ ಕೆ. ಖಾನಾಪೂರೆ, ಪ್ರಕಾಶ ಎಂ. ಕುಂಬಾರ, ಸಂಜುಬಾಯಿ ಬಿ. ಮೈಂದರ್ಗಿ, ಕವಿತಾ ಎಂ. ಹಿರೇಮಠ, ದೀಪಾ ಯೋಗಿರಾಜ ಮಾಡಿಯಾಳೆ, ವಿಜಯಲಕ್ಷ್ಮೀ ಬಿ. ಕೊರಳ್ಲಿ, ಜ್ಯೋತಿ ಡಿ. ಶಿಂಧೆ, ನಾಗೇಂದ್ರ ಬಿ. ಮುಗಳೆ, ಬಸವರಾಜ ಎಸ್. ಜಮಾದಾರ ಮತ್ತು ಮುಖ್ಯ ಕಾರ್ಯನಿರ್ವಾಹಕ ಸೋಮನಾಥ ನಿಂಬರಗಿ ಉಪಸ್ಥಿತರಿರುವರು ಎಂದು ತಿಳಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…