ಬೆಂಗಳೂರು; ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಕೋರ್ಸ್‍ಗಳನ್ನು ಮಾಡಲು ಸಾಲವನ್ನು ಒದಗಿಸಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ತಿಳಿಸಿದರು.
ಇಂದು ಕೆಎಂಡಿಸಿ ಭವನದಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ 2023-24ನೇ ಸಾಲಿನ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಈಗಾಗಲೆ 4 ಯೋಜನೆಗಳು ಚಾಲನೆಯಲ್ಲಿದ್ದು, ಪ್ರಸ್ತುತ 8 ಯೋಜನೆಗಳು ಪ್ರಾರಂಭ ಮಾಡಲಾಗಿದೆ ಎಂದರು.
ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಕೋರ್ಸ್‍ಗಳನ್ನು ಮಾಡಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ 60% ಅಂಕವನ್ನು ಪಡೆದಿರಬೇಕು. ವಿದೇಶ ವಿಶ್ವವಿದ್ಯಾಲಯದಿಂದ ಆಫರ್ ಲೆಟರ್ ಪಡೆÀದಿರಬೇಕು. ನಿಗಮಕ್ಕೆ ಕಟ್ಟಡ ಅಥವಾ ಜಮೀನಿನ ಆಸ್ತಿ ಅಡಮಾನದ ಮೇಲೆ ಮಾತ್ರ ಸಾಲ ಒದಗಿಸಲಾಗುವುದು ಎಂದರು.
ಅರಿವು ಯೋಜನೆಯಡಿ ವೃತ್ತಿಪರ ಕೋರ್ಸ್‍ಗಳಾದ ಎಂಬಿಬಿಎಸ್, ಎಂಡಿ, ಎಂಎಸ್, ಬಿಇ, ಬಿ.ಟೆಕ್, ಎಂಇ, ಎಂ.ಟೆಕ್, ಬಿಡಿಎಸ್, ಎಂಡಿಎಸ್, ಬಿ.ಆಯುಷ್. ಎಂ.ಆಯುಷ್, ಎಂಬಿಎ, ಎಂಸಿಎ, ಎಲ್‍ಎಲ್‍ಬಿ, ಬಿ.ಆರ್ಚ್, ಎಂ.ಆರ್ಚ್ ಕೋರ್ಸ್ ಮಾಡಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅವರು ವ್ಯಾಸಂಗ ಪೂರ್ಣಗೊಳಿಸುವವರಿಗೆ ಪ್ರತಿ ವರ್ಷಕ್ಕೆ ರೂ.50,000/- ದಿಂದ ರೂ.3,00,000/- ವರೆಗೆ ಸಾಲವನ್ನು ಮಂಜೂರು ಮಾಡಲಾಗುತ್ತದೆ. ವ್ಯಾಸಂಗ ಪೂರ್ಣಗೊಳಿಸಿದ 6 ತಿಂಗಳ ನಂತರ ಅಂತಹ ವಿದ್ಯಾರ್ಥಿಯು ಶೇಕಡ. 2ರ ಸೇವಾ ಶುಲ್ಕದೊಂದಿಗೆ ಸಾಲವನ್ನು ಮರುಪಾವತಿ ಮಾಡಬೇಕಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೀಟ್ (ಓಇಇಖಿ) ಮೂಲಕ ಆಯ್ಕೆಯಾದ ಎಂ.ಬಿ.ಬಿ.ಎಸ್, ಎಂ.ಡಿ / ಎಂ.ಎಸ್ ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಟ ರೂ.3.00 ಲಕ್ಷದವರೆಗೆ ಸಾಲ ನೀಡಲಾಗುವುದು ಎಂದು ತಿಳಿಸಿದರು.
ಸ್ವಾವÀಲಂಬಿ ಸಾಲ ಯೋಜನೆಯನ್ನು ನಿಗಮದ ವತಿಯಿಂದ ರಾಷ್ಟ್ರೀಕೃತ ಬ್ಯಾಂಕುಗಳು ಷೆÀಡ್ಯೂಲ್ ಬ್ಯಾಂಕ್ /ಆರ್.ಬಿ.ಐ. ನಿಂದ ಮಾನ್ಯತೆ ಪಡೆದ ವಿವಿಧ ಫೈನಾನ್ಸ್ ಸಂಸ್ಥೆಗಳು ಸಹಕಾರ ಬ್ಯಾಂಕ್, ಸೊಸೈಟಿಗಳ ಸಹಯೋಗದೊಂದಿಗೆ ಅನುμÁ್ಠನಗೊಳಿಸಲಾಗುತ್ತಿದ್ದು, ಈ ಸಂಸ್ಥೆಗಳು ಸಾಲ ಮೂಜೂರಾತಿ ನೀಡಿದ ಫಲಾನುಭವಿಗಳಿಗೆ ಗೂಡ್ಸ್ ವಾಹನ ಅಥವಾ ಟ್ಯಾಕ್ಸಿ ಖರೀದಿಸಲು ಕನಿಷ್ಠ ಶೇ.50ರಷ್ಟು ಸಹಾಯಧನ ಗರಿಷ್ಠ ರೂ.3.00ಲಕ್ಷ ಸಹಾಯಧನವನ್ನು ನೀಡಲಾಗುವುದು.
‘ಶ್ರಮಶಕ್ತಿ’ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತ ವರ್ಗದ ಕುಲ ಕಸುಬುದಾರರಿಗೆ ತರಬೇತಿ ನೀಡಿ, ಅವರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ನಿಗಮದಿಂದ ಕಡಿಮೆ ಬಡ್ಡಿದರದಲ್ಲಿ ಕನಿಷ್ಟ ರೂ.50,000/- ಸಾಲ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದರು.
ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿಧವೆ/ವಿಚ್ಚೇದಿತ ಅವಿವಾಹಿತ ಮಹಿಳೆಯರಿಗೆ ಸಬಲೀಕರಣಕ್ಕಾಗಿ ವಿಶೇಷ ಯೋಜನೆಯಾಗಿದೆ. ಯೋಜನೆಯಡಿ ರೂ. 25,000 ಸಾಲ ಮತ್ತು ರೂ.25,000 ಸಹಾಯಧನ ಸೇರಿ ಕನಿಷ್ಠ ಒಟ್ಟು ರೂ.50,000/- ಸಾಲ ಮತ್ತು ಸಹಾಯಧನವನ್ನು ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ಒದಗಿಸಲಾಗುವುದು.
ವೃತ್ತಿ ಪೆÇ್ರೀತ್ಸಾಹ ಯೋಜನೆ ಅಡಿಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಅನ್ವಯವಾಗುವಂತೆ ಬ್ಯಾಂಕ್ ಸಾಲದ ಬದಲಾಗಿ ಕೆ.ಎಂ.ಡಿ.ಸಿ ನಿಗಮದ ವತಿಯಿಂದಲೇ ಒಟ್ಟು ಸಾಲದ ಮೊತ್ತ ಒಂದು ಲಕ್ಷ ರೂಪಾಯಿಗಳಲ್ಲಿ ಶೇ.50ರಷ್ಟು ಸಾಲ, ಶೇ.50ರಷ್ಟು ಸಹಾಯಧನದೊಂದಿಗೆ ವೃತ್ತಿ ಪೆÇ್ರೀತ್ಸಾಹ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಗಂಗಾ ಕಲ್ಯಾಣ ಏತ ನೀರಾವರಿ ಯೋಜನೆ ಅಡಿಯಲ್ಲಿ ನದಿ ಮೂಲದ ನೀರನ್ನು ಪೈಪ್ ಲೈನ್ ಮೂಲಕ ಮೇಲಕ್ಕೆ ಎತ್ತಿ, ಕೃಷಿ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನು ನಿಗಮವು ಅನುμÁ್ಠನಗೊಳಿಸಿ ನಂತರ ಅದನ್ನು ಫಲಾನುಭವಿಗಳು ಗ್ರಾಹಕರ ಸಹಕಾರ ಸಂಘಕ್ಕೆ ಹಸ್ತಾಂತರ ಮಾಡಲಾಗುವುದು. ಉತ್ತಮ ಬೆಳೆ ಪಡೆಯುವ ಸಲುವಾಗಿ ಕೃಷಿ ತಜ್ಞರಿಂದ ಸಲಹೆ ಮತ್ತು ನೆರವನ್ನು ಕೊಡಿಸಲಾಗುವುದು. ಏತ ನೀರಾವರಿ ಯೋಜನೆಯ ಘಟಕ ವೆಚ್ಚವನ್ನು ಪ್ರತಿ ಎಕರೆಗೆ ರೂ.40,000/-ದಂತೆ ಬಿಡುಗಡೆ ಮಾಡಲಾಗುವುದು. ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ.
ಗಂಗಾ ಕಲ್ಯಾಣ ವೈಯಕ್ತಿಕ ಕೊಳವೆ ಬಾವಿ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಲ್ಲಿ ಹರಿಯುವ ನೀರಿನ ವ್ಯವಸ್ಥೆ ಲಭ್ಯವಿರುವುದಿಲ್ಲವೋ ಅಂತಹ ಸ್ಥಳದಲ್ಲಿ ತಜ್ಞ ಭೂ ವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲ ಬಿಂದು ವ್ಯಾಪ್ತಿಯೊಳಗೆ ನೆಲದಡಿಯಲ್ಲಿ ಕೊಳವೆ ಬಾವಿಯನ್ನು ಕೊರೆದು, ನಂತರ ನೀರು ಸಂಗ್ರಹಿಸಲು ಟ್ಯಾಂಕ್‍ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಕೊಳವೆ ಮೂಲಕ ಕೃಷಿಭೂಮಿಗೆ ನೀರನ್ನು ಒದಗಿಸಲಾಗುತ್ತದೆ.
ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿಂದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆ ಬಾವಿ ಕೊರೆಸಿ ಅಥವಾ ತೆರೆದ ಬಾವಿಯನ್ನು ನಿರ್ಮಿಸಿ ಅದಕ್ಕೆ ನಿಗಮದಿಂದ ಪಂಪ್‍ಸೆಟ್‍ನ್ನು ಅಳವಡಿಸಲಾಗುವುದು, ಪಂಪ್ ಸೆಟ್ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ.4.00 ಲಕ್ಷಗಳನ್ನು ಬೆಂಗಳೂರು ಗ್ರಾಮಾಂತರ, ಕೋಲಾರ ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ನಿಗದಿಪಡಿಸಿರುತ್ತದೆ ಮತ್ತು ಇತರೆ ಜಿಲ್ಲೆಗಳಿಗೆ ರೂ.3.00 ಲಕ್ಷ ರೂ.ಗಳನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು.
ಸÀಮುದಾಯ ಆಧಾರಿತ ತರಬೇತಿ ಯೋಜನೆಯಡಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗ ಹೊಂದಿರುವ ಯುವಕ, ಯುವತಿಯರಿಗೆ ಸ್ವಂತ ಉದ್ಯೋಗ / ಕಛೇರಿ, ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ಪುರುಷ ಮತ್ತು ಮಹಿಳೆಯರಿಗೆ ಮಾನ್ಯತೆ ಪಡೆದ ಕೇಂದ್ರಗಳೊಂದಿಗೆ ಬ್ಯೂಟಿ ಪಾರ್ಲರ್ ತರಬೇತಿ ಪ್ರಮಾಣೀಕರಣ ಕೋರ್ಸ್, ಹೆವಿ ಅರ್ಥ್ ಮೂವರ್ ತರಬೇತಿ, (ಜೆಸಿಬಿ, ಕ್ರೇನ್, ಫೆÇೀಕ್ ಲೇನ್ ಸೇರಿದಂತೆ ಭಾರಿ ವಾಹನ ಚಾಲನಾ ತರಬೇತಿ), ಶಾರ್ಟ್ ಹ್ಯಾಂಡ್ ಟ್ರೈನಿಂಗ್, ಭದ್ರತಾ ಸೇವೆಗಳ ತರಬೇತಿ, ಕಛೇರಿ ಆಡಳಿತ ತರಬೇತಿ ಯೋಜನೆಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.