ಮಂಡಳಿಯ ಕೆಲಸ ಕಾರ್ಯಗಳು ಸಮರ್ಪಕವಾಗಿ ಕಾರ್ಯಗಳು ನಡೆಯುವ ನಿಟ್ಟಿನಲ್ಲಿ ಇಂಜಿನಿಯರ್ ಗಳ ನೇಮಕಾತಿ ಅವಶ್ಯಕತೆ ಇದೆ. ಶೀಘ್ರವೇ ಸಚಿವರು ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಭೇಟಿ ಮಾಡಿ ಚರ್ಚಿಸಿ 273 ಇಂಜಿನಿಯರ್ ಗಳ ಅವಶ್ಯಕತೆ ಇದೆ ಎಂದು ಮನವರಿಕೆ ಮಾಡಿಕೊಡಲಾಗುವುದು. ಸದ್ಯ 60 ಇಂಜಿನಿಯರ್ ಕೆಲಸ ಮಾಡುತ್ತಿದ್ದಾರೆ. -ಡಾ. ಅಜಯಸಿಂಗ್, ಕೆಕೆಆರ್ಡಿಬಿ ಅಧ್ಯಕ್ಷ
ಕಲಬುರಗಿ: ಕಲ್ಯಾಣ ಕನಾಟಕ ಭಾಗದ ಅಭ್ಯರ್ಥಿಗಳ ನೇಮಕಾತಿ ಹಾಗೂ ಮುಂಬಡ್ತಿಗೆ ಸಂಬಂಧಿಸಿದಂತೆ 371 (ಜೆ) ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಿ ಅಚಿತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಕೆಆರ್‍ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಅಜಯ್ ಸಿಂಗ್ ಹೇಳಿದರು.
ಮಂಗಳವಾರ ನಿರ್ಮಾಣ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಕಾಮಗಾರಿ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ ಶೀಘ್ರವೇ ಕಲ್ಯಾಣ ಕರ್ನಾಟಕ ಶಾಸಕರ ಕಾರ್ಯಗಳ ಮೌಲ್ಯಮಾಪನ ಮಾಡಲಾಗುವುದು ಎಂದು ತಿಳಿಸಿದರು.
ಪಸಕ್ತ ಆರ್ಥಿಕ ವರ್ಷದಲ್ಲಿ ಮಂಡಳಿ ಅನುದಾನ ಬಳಕೆ ಮಾಡಲು ಡಿಸೆಂಬರ್ ವರೆಗೂ ಕಾಲಾವಕಾಶವಿದೆ. ಅದರೊಳಗೆ ತಮ್ಮ ಕ್ಷೇತ್ರದಲ್ಲಿ ಕೈಗೊಳ್ಳುವ ಕಾಮಗಾರಿಗಳ ಕುರಿತು ಕ್ರಿಯಾಯೋಜನೆಯನ್ನು ಬೇಗನೆ ಶಾಸಕರು ಸಲ್ಲಿಸಿದರೆ ಅನುದಾನ ನೀಡಲು ಅನುಕೂಲವಾಗುವುದು ಎಂದರು.
ಡಿಸೆಂಬರ್ ಲೋಕಾರ್ಪಣೆ: ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಡಿಸೆಂಬರ್ ಅಂತ್ಯದ ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳು ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಾಗುವುದು. ಈಗಾಗಲೇ ಶೇಕಡ 75 ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಮಂಡಳಿಯಿಂದ ಒಟ್ಟು 1045 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಅನುದಾನದ ಸಮರ್ಪಕ ಬಳಕೆ ಹಾಗೂ ತ್ವರಿತ ಕಾಮಗಾರಿ ಮಾಡುವ ನಿಟ್ಟಿನಲ್ಲಿ ತಾವೆಂದು ಭೇಟಿ ನೀಡಿ ವೀಕ್ಷಣೆ ಮಾಡಿದ್ದಾಗಿ ಹೇಳಿದರು.
ಮಂಡಳಿ ಕಾರ್ಯದರ್ಶಿ ಅನಿರುದ್ಧ ಶ್ರವಣ್, ಜಯದೇವ ಆಸ್ಪತ್ರೆಯ ಬಾಬುರಾವ್ ಹುಡುಗಿಕರ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…