ಕಲಬುರಗಿ; ನಗರ ಪ್ರದೇಶದಲ್ಲಿನ ಜನರು ಎದುರಿಸುತ್ತಿರುವ ಮೂಲ ಸೌಕರ್ಯ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹತ್ತು ಹಲವು ವಿಷಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಲು ಪಾಲಿಕೆ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಂಪ್ರಭು ಪಾಟೀಲ್ ಅವರು ಕಲಬುರಗಿ ಮಹಾ ನಗರದಲ್ಲಿ ಇದೇ ಆ. 24 ರ ಗುರುವಾರ ಬೆಳಗಿನ 8. 30 ಗಂಟೆಯಿಂದ ಜಿಲ್ಲಾಧಿಕಾರಿ ಕಚೇರಿಯಿಂದ ನಗರ ಪ್ರದಕ್ಷಿಣೆ ನಡೆಸಲಿದ್ದಾರೆ.
ಶಾಸಕರು ನಡೆಸುತ್ತಿರುವ ಕಲಬುರಗಿ ನಗರ ಪ್ರದಕ್ಷಿಣೆಯಲ್ಲಿ ಜಿಲ್ಲಾಡಳಿತದ ಮುಖ್ಯಸ್ಥರಾದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪಾಲಿಕ ಆಯುಕ್ತ ಭುವನೇಶ ಪಾಟೀಲ್ ಹಾಗೂ ಜಲ ಮಂಡಳಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇರುತ್ತಾರೆ.
ಈ ಪ್ರದಕ್ಷಿಣೆಯಲ್ಲಿ ಪ್ರಧಾನವಾಗಿ ನಗರಾದ್ಯಂತ ನಡೆಯುತ್ತಿರುವ ಎಲ್ ಆಂಡ್ ಟಿ ಕಂಪನಿ ಕೈಗೆತ್ತಿಕೊಂಡಿರುವ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿಗಳ ಸುತ್ತಮುತ್ತ ವಿಶೇಷವಾಗಿ ಗಮನ ಹರಿಸಲಾಗುತ್ತಿದೆ. ನಗರದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ನಗರ ಪ್ರದಕ್ಷಿಣೆಯ ಸಂದರ್ಭದಲ್ಲಿ ಬಂದು ತಮ್ಮ ಅನಾನುಕೂಲಲತೆಗಳ ಬಗ್ಗೆ ಶಾಸಕರು, ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ.