ಕಲಬುರಗಿ; ನಗರದ ಹೃದಯ ಭಾಗದಲ್ಲಿ 6.8 ಎಕರೆ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ ಆರ್ಥಿಕ ನೆರವಿನೊಂದಿಗೆ ಸುಮಾರು 183 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖಾ ಆಸ್ಪತ್ರೆಯ ಕಾಮಗಾರಿ ಸ್ಥಳಕ್ಕೆ ಮಂಗಳವಾರ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಕೆ.ಆರ್.ಡಿ.ಬಿ. ನೆರವಿನ ಬಹುದೊಡ್ಡ ಯೋಜನೆ ಇದಾಗಿದೆ. 2019ರಲ್ಲಿ ಕಾಮಗಾರಿ ಆರಂಭವಾಗಿದ್ದು, ಪ್ರಸ್ತುತ ಕಾಮಗಾರಿ ಯುದ್ದೋಪಾದಿಯಲ್ಲಿ ಸಾಗಿದೆ. ಬರುವ ಡಿಸೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ತದನಂತರ ಈ ಸಂಸ್ಥೆಯನ್ನು ಪ್ರದೇಶಕ್ಕೆ ಲೋಕರ್ಪಾಣೆ ಮಾಡಲಾಗುವುದು ಎಂದರು.
ಸಂವಿಧಾನಕ್ಕೆ ತಿದ್ದುಪಡಿ ತಂದು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371ಜೆ ವಿಶೇಷ ಮೀಸಲಾತಿ ದೊರಕಿದೆ. ಇದರ ಸವಿನೆನಪಿನಲ್ಲಿ ಜಯದೇವ ಸಂಸ್ಥೆಯ ಕಲಬುರಗಿ ಘಟಕದ ನೂತನ ಆಸ್ಪತ್ರೆಯ ಹಾಸಿಗೆಗಳ ಸಂಖ್ಯೆಯೂ 371 ಇರಲಿದೆ ಎಂದ ಅವರು, ಇದರ ಜೊತೆಗೆ ಆಸ್ಪತ್ರೆಯ ಸಿಬ್ಬಂದಿಗಳ ನೇಮಕಾತಿಯೂ ನಡೆಯಲಿದೆ ಎಂದರು.
ಕಲಬುರಗಿಯಲ್ಲಿ 2016ರಲ್ಲಿ ಜಯದೇವ ಆಸ್ಪತ್ರೆ ಆರಂಭಕ್ಕು ಮುನ್ನ ಇಲ್ಲಿನ ಹೃದ್ರೋಗಿಗಳು ಚಿಕಿತ್ಸೆಗೆ ನೆರೆಯ ಸೋಲಾಪೂರ, ಹೈದ್ರಾಬಾದ್ ಅಥವಾ ದೂರದ ಬೆಂಗಳೂರಿಗೆ ಹೋಗಬೇಕಿತ್ತು. ಜಯದೇವ ಆಸ್ಪತ್ರೆ ಸ್ಥಾಪನೆ ಪರಿಣಾಮ ಇದೀಗ ಇಲ್ಲಿಯೇ ಗುಣಮಟ್ಟದ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆ ನಿರ್ಮಾಣದಿಂದ ಈ ಭಾಗದ ಬಡ ರೋಗಿಗಳಿಗೆ ಮತ್ತಷ್ಟು ಸೇವೆ ಗುಣಮಟ್ಟದಿಂದ ಸಿಗಲಿದೆ ಎಂದರು.
ಕೆ.ಕೆ.ಆರ್.ಡಿ.ಬಿ. ಮಂಡಳಿ ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಉಪ ಕಾರ್ಯದರ್ಶಿ ಆನಂದ ಪ್ರಕಾಶ ಮೀನಾ ಮತ್ತಿತರಿದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…