ಕಲಬುರಗಿ: ನಿನ್ನೆ ಅಫಜಲಪುರ ತಾಲೂಕಿನ ನೀಲೂರ ಗ್ರಾಮದಲ್ಲಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿ ಹೆದರಿಕೊಂಡು ನೇಣಿಗೆ ಶರಣಾದ ಘಟನೆ ತಾಲೂಕಿನ ಸ್ಟೇಷನ್ ಗಾಣಗಾಪುರದಲ್ಲಿ ನಡೆದಿದೆ.
ಪೋಸಯ್ಯ ಕಲ್ಯಾಣಕರ್ (28) ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಸ್ಟೇಶನ್ ಗಾಣಗಾಪುರ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ನಿನ್ನೆ ರಾತ್ರಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹಂದಿ ಹಿಡಿಯುವ ಕಾಯಕ ಮಾಡುತ್ತಿದ್ದ ಆರೋಪಿ, ನಿನ್ನೆ ಮಧ್ಯಾಹ್ನ ನೀಲೂರ ಗ್ರಾಮದಲ್ಲಿ ಬಹಿರ್ದಸೆಗೆ ಹೋಗಿದ್ದ ಲಕ್ಷ್ಮಿಬಾಯಿ ಹೂಗಾರ ಎಂಬ ಮಹಿಳೆಯನ್ನು ಕೊಲೆ ಮಾಡಿ ಆಕೆ ಬಳಿಯ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಆತನ ಬಂಧನಕ್ಕೆ ಸ್ಟೇಷನ್ ಗಾಣಗಾಪುರದಲ್ಲಿರುವ ಆತನ ಮನೆಗೆ ತೆರಳಿದ್ದರು.
ಆದರೆ, ಆ ಸಮಯದಲ್ಲಿ ಆರೋಪಿ ಮನೆಯಲ್ಲಿ ಇರದ ಕಾರಣ ಹಿಂತಿರುಗಿದ್ದಾರೆ. ಬಳಿಕ ಪೊಲೀಸರು ಮನೆಯವರೆಗೆ ಬಂದಿರುವ ವಿಷಯ ತಿಳಿದ ಆರೋಪಿ ಪೋಸಯ್ಯ ಹೆದರಿಕೊಂಡು ತಡರಾತ್ರಿ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…