ಕಲಬುರಗಿ: ಚಂದ್ರಯಾನ-3 ಲ್ಯಾಂಡರ್ (ವಿಕ್ರಮ್) ಸಾಪ್ಟ್ ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಚಂದ್ರಸ್ಪರ್ಶವಾಗಿರುವ ಪ್ರಯುಕ್ತ ನಗರದ ಆಳಂದ ರಸ್ತೆಯಲ್ಲಿರುವ ಇ.ಪಿ.ಎಫ್, ಕ್ಷೇತ್ರೀಯ ಕಾರ್ಯಾಲಯದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್. ಸೋಮನಾಥ್ ಹಾಗೂ ಮಾಜಿ ಅಧ್ಯಕ್ಷ ಕೆ.ಶಿವನ್ ಅವರ ಭಾವಚಿತ್ರವನ್ನು ಹಿಡಿದುಕೊಂಡು ಭಾರತ ದೇಶದ ಹೆಮ್ಮೆಯ ಇಸ್ರೋ ವಿಜ್ಞಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಕೇಕ್ ಕತ್ತರಿಸುವುವ ಮೂಲಕ ಸಂಭ್ರಮಾಚರಣೆ ಮಾಡಿದರು.