ಬಿಸಿ ಬಿಸಿ ಸುದ್ದಿ

#VG WOMENS College: ಚಂದ್ರಯಾನ 3 ಯಶಸ್ವಿಯ ಐತಿಹಾಸಿಕ ಕ್ಷಣದ ವೀಕ್ಷಣಾ ಕಾರ್ಯಕ್ರಮ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಇಂದು ಮಹಾವಿದ್ಯಾಲಯದಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದ ಮಾಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿನಿಯರಿಗೋಸ್ಕರ “ಚಂದ್ರಯಾನ-3 ಐತಿಹಾಸಿಕ ಕ್ಷಣದ ವೀಕ್ಷಣೆ” ಎಂಬ ಶಿರ್ಷಿಕೆಯ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಸಭಾಂಗಣದಲ್ಲಿ ಭಾರತ ಮಾತ್ರವಲ್ಲ ವಿಶ್ವವೇ ಅತ್ಯಂತ ಕುತೂಹಲದಿಂದ ಎದುರು ನೋಡುತ್ತಿರುವ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯ ವೀಕಣೆಗೋಸ್ಕರ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡು ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯವರು ಕಾದು ಕುಳಿತಿದ್ದರು.

ನಿಗದಿತ ಸಮಯಕ್ಕೆ ಸರಿಯಾಗಿ ಚಂದ್ರಯಾನ 3 ರ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯುತ್ತಲೆ ವಿದ್ಯಾರ್ಥಿನಿಯರು “ಫಲಿಸಿತು ಕೊಟ್ಯಾಂತರ ಜನರ ಪ್ರಾರ್ಥನೆ, ಭಾಗಿಯಾದರು ವೀಕ್ಷÀಣೆಯಲಿ ಶ್ರೀಮತಿ ವಿ. ಜಿ ಮಹಿಳಾ ಮಹಾವಿದ್ಯಾರ್ಥಿನಿಯರು” ಎಂದು ಘೋಷಣೆಗಳನ್ನು ಕೂಗುತ್ತಾ ಸಂತೋಷದಿಂದ ಕುಣಿದು ಕುಪ್ಪಳಿಸಿದರು.

ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ಚಂದ್ರಯಾನ-3ರ ಐಶಸ್ಸಿನ ಕುರಿತಾಗಿ ಮಾತನಾಢುತ್ತಾ ಇಂದು ಭಾರತದ ಇಸ್ರೋದ ವಿಜ್ಞಾನಿಗಳು ಇತಿಹಾಸವನ್ನು ನಿರ್ಮಿಸಿ ವಿಶ್ವದಲ್ಲಿ ಭಾರತ ದೇಶದ ಇತಿಹಾಸವÀನ್ನು ನಿರ್ಮಿಸಿದ್ದಾರೆ ಎಂದು ಹೇಳುತ್ತಾ ಎಲ್ಲಾ ವಿಜ್ಞಾನಿಗಳಿಗೆ ಮಹಾವಿದ್ಯಾಲಯದ ಪರವಾಗಿ ಅಭಿನಂದನೆಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಜೊತೆಗೆ ಮಹಾವಿದ್ಯಾಲಯದ ಉಪಪ್ರಾಚಾರ್ಯರಾದ ಡಾ. ವೀಣಾ ಎಚ್, ಶ್ರೀಮತಿ ಉಮಾ ರೇವೂರ, ಬೋಧಕ ಮತ್ತು ಬೋಧಕೇತ್ರರ ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು ಎಂದು ಮಹಾವಿದ್ಯಾಲಯದ ನ್ಯಾಕ್ ಸಂಯೋಜಕರಾದ ಡಾ. ಮೋಹನರಾಜ ಪತ್ತಾರ ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago