ಸಪ್ಟೆಂಬರ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್; ನ್ಯಾ.ಮಲ್ಲಿಕಾರ್ಜುನ ಕಮತಗಿ

0
22

ಸುರಪುರ : ನ್ಯಾಯಾಲಯದಲ್ಲಿ ನಡೆಸಲಿರುವ ಲೋಕ ಅದಾ¯ತ್ ಅಂಗವಾಗಿ ಬುಧವಾರ ನ್ಯಾಯಾಧೀಶರು ಸುದ್ದಿಗೋಷ್ಠಿ ನಡೆಸಿದರು.

ಈ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿಯವರು ಮಾತನಾಡಿ, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸೆ.9 ರಂದು ಇಲ್ಲಿಯ ಜೆಎಂಎಫ್‍ಸಿ ಕೋರ್ಟ್‍ನಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ,ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಕಳೆದ ಜುಲೈ ತಿಂಗಳಲ್ಲಿ ನಮ್ಮ ಕೋರ್ಟ್‍ನಲ್ಲಿ ಜರುಗಿದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 3701 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಹೇಳಿದರು.

Contact Your\'s Advertisement; 9902492681

ಕಾನೂನು ಸೇವೆಗಳ ಪ್ರಾಧಿಕಾರ ನಡೆಸುವ ಲೋಕ್ ಅದಾಲತ್‍ನಲ್ಲಿ ರಾಜೀ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸುವುದರಿಂದ ಉಭಯ ಕಕ್ಷಿದಾರರಿಗೆ ಸರ್ವ ಸಮ್ಮತವಾದ ನ್ಯಾಯ ದೊರಕಿ ಅಮೂಲ್ಯವಾದ ಸಮಯ ಮತ್ತು ಹಣ ಉಳಿತಾಯಗೊಂಡು ನೆಮ್ಮದಿಯ ಜೀವನ ನಡೆಸಬಹುದು. ಇಲ್ಲಿಯ ಮೂರು ನ್ಯಾಯಾಲಯದಲ್ಲಿ ಸುಮಾರು 6 ಸಾವಿರ ಪ್ರಕರಣಗಳು ಬಾಕಿ ಇವೆ. ಜನರು ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು ಶೀಘ್ರವಾರಿ ಪರಿಹರಿಸಿಕೊಂಡು ಉತ್ತಮ ರೀತಿಯಲ್ಲಿ ಜೀವನ ನಡೆಸಬೇಕು ಎಂದರು.

ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ ಕೇಸ್, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಕೇಸ್, ಸಾಲ ವಸೂಲಾತಿ, ಆಸ್ತಿ ವಿಭಾಗ ಪ್ರಕರಣ, ವೈವಾಹಿಕ ಪ್ರಕರಣಗಳು, ಭೂ ಸ್ವಾದೀನ ಕೇಸ್, ಜನನ ನೋಂದಣಿ ಕೇಸ್, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಅದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ನುಡಿದರು. ಜೆಎಂಎಫ್‍ಸಿ ಕೋರ್ಟ್‍ನ ದಿವಾಣಿ ನ್ಯಾಯಾಧೀಶ ಮಾರುತಿ.ಕೆ, ಹೆಚ್ಚುವರಿ ನ್ಯಾಯಾಧೀಶ ಬಸವರಾಜ್ ಅವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here