ಸರಿಯಾಗಿ ವಿದ್ಯುತ್ ನೀಡುವಂತೆ ಒತ್ತಾಯಿಸಿ ಜೆಸ್ಕಾಂ ಕಚೇರಿ ಮುಖ್ಯ ದ್ವಾರ ಬಂದ್ ಮಾಡಿದ ರೈತರು

0
49

ಸುರಪುರ: ಸರಿಯಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ ಇದರಿಂದ ಬೆಳೆಗಳು ಒಣಗಲಾರಂಭಿಸಿವೆ,ಸರಿಯಾಗಿ ವಿದ್ಯುತ್ ವಿತರಣೆ ಮಾಡುವಂತೆ ಆಗ್ರಹಿಸಿ ನಗರದ ರಂಗಂಪೇಟೆಯ ಜೆಸ್ಕಾಂ ಉಪ ವಿಭಾಗೀಯ ಕಚೇರಿ ಉಪ ವಿಭಾಗಿಯ ಕಚೇರಿ ಮುಖ್ಯದ್ವಾರ ಬಂದ್ ಮಾಡಿದ ರೈತರು ಆಕ್ರೋಶ ವ್ಯಕ್ತಒಡಿಸಿದರು.

ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಅನೇಕ ಜನ ರೈತರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಬಣದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಉಪ ಪ್ರಧಾನ ಸಂಚಾಲಕ ಮಾಳಪ್ಪ ಕಿರದಳ್ಳಿ ಮಾತನಾಡಿ,ರೈತರು ಹಾಕಿದ ಬೆಳೆಗಳಿಗೆ ನೀರಿನ ಅಗತ್ಯವಿದೆ,ಆದರೆ ಸರಿಯಾಗಿ ವಿದ್ಯುತ್ ಸರಬರಾಜು ಮಾಡದಿದ್ದರೆ ರೈತರು ಏನು ಮಾಡಬೇಕು,ಇಲ್ಲಿಯ ಜೆ.ಇ ಶಾಂತಪ್ಪ ರೈತರು ಕರೆ ಮಾಡಿದರೆ ಸ್ಪಂಧಿಸದೆ ನಿರ್ಲಕ್ಷ್ಯ ತೋರುತ್ತಾರೆ,ಇದರಿಂದ ಬೇಸತ್ತು ಇಂದು ದೇವರಗೋನಾಲ,ಬೊಮ್ಮನಹಳ್ಳಿ, ಸಿದ್ದಾಪುರ,ಹಸನಾಪುರ ಸೇರಿದಂತೆ ವಿವಿಧ ಗ್ರಾಮಗಳ ರೈತರು ಜೆಸ್ಕಾಂ ಅಧಿಕಾರಿಗಳ ನಡೆಗೆ ಬೇಸತ್ತು ಇಂದು ಮುಖ್ಯದ್ವಾರ ಬಂದ್ ಮಾಡಿ ಪ್ರತಿಭಟಿಸಲಾಗುತ್ತದೆ, ಒಂದು ವೇಳೆ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಪ್ರತಿಭಟನಾ ಸ್ಫಳಕ್ಕೆ ಆಗಮಿಸಿದ ಜೆಸ್ಕಾಂ ಇಲಾಖೆ ಎಇಇ ಅಶೋಕ ಅವರು ಮನವಿಯನ್ನು ಆಲಿಸಿದರು,ಈ ಸಂದರ್ಭದಲ್ಲಿ ಮಾಳಪ್ಪ ಕಿರದಳ್ಳಿ ಸೇರಿ ಅನೇಕ ರೈತರು ಆಕ್ರೋಶ ವ್ಯಕ್ತಪಡಿಸಿ,ಕೂಡಲೇ ಜೆ.ಇ ಶಾಂತಪ್ಪ ಅವರನ್ನು ಕಚೇರಿ ಕೆಲಸಕ್ಕೆ ನಿಯೋಜನೆ ಮಾಡಿ ನಮ್ಮ ಭಾಗದ ಜೆ.ಇ ಕಾರ್ಯದಿಂದ ಅವರನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.ಮತ್ತು ಸರಿಯಾದ ರೀತಿಯಲ್ಲಿ ವಿದ್ಯುತ್ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರ ಮನವಿಗೆ ಸ್ಪಂಧಿಸಿದ ಎಇಇ ಅಶೋಕ ಅವರು ಎಲ್ಲಾ ಬೇಡಿಕೆ ಈಡೇರಿಸುವ ಭರವಸೆ ನೀಡಿದ ನಂತರ ಮನವಿ ಸಲ್ಲಿಸಿ ಪ್ರತಿಭಟನೆ ಕೈಬಿಡಲಾಯಿತು.ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಸಂಚಾಲಕ ಶರಣಪ್ಪ ತಳವಾರಗೇರ ಸೇರಿದಂತೆ ಅನೇಕ ಜನ ರೈತರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here