ಕಲಬುರಗಿ: ಬಹುನಿರೀಕ್ಷಿತ, ಐತಿಹಾಸಿಕ, ಇಡೀ ವಿಶ್ವವೇ ಭಾರತದೆಡೆಗೆ ತಿರುಗಿ ನೋಡುವಂತೆ ಮಾಡಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ವಿಶ್ವಗುರುವನ್ನಾಗಿಸಿದ, ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನವಾದ ಬುಧವಾರ ಸಂಜೆ ಚಂದ್ರಯಾನ-3 ಯೋಜನೆಯಲ್ಲಿ ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯುವ ಮೂಲಕ ವಿಶ್ವದ ಪ್ರಥಮ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದ್ದು, ಇಡೀ ದೇಶದ ಎಲ್ಲರಿಗು ಸಂಭ್ರಮದ ದಿನವಾಗಿ ಪರಿಣಮಿಸಿದೆ ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ.ಪಾಟೀಲ ಹೇಳಿದರು.
ಚಂದ್ರಯಾನ-3 ಯಶಸ್ಸುವಾದ ಪ್ರಯುಕ್ತ ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‍ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ ಮತ್ತು ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದ ವತಿಯಿಂದ ಬುಧವಾರ ಸಂಜೆ ಜರುಗಿದ ವಿಜಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಗಳೊಂದಿಗೆ ಪ್ರಭಾತ ಪೇರಿಯಲ್ಲಿ ಅವರು ಮಾತನಾಡಿದರು.
ಕಂಪ್ಯೂಟರ ತರಬೇತಿ ಕೇಂದ್ರದ ಮುಖ್ಯಸ್ಥ ಅಸ್ಲಾಂ ಶೇಖ್ ಮಾತನಾಡಿ, ಚಂದ್ರಯಾನ-3ರ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಉಭಯ ಸಂಸ್ಥೆಯ ವತಿಯಿಂದ ಅಭಿನಂದನೆ ಸಲ್ಲಿಸಿದರು. ರಾಷ್ಟ್ರಧ್ವಜಗಳೊಂದಿಗೆ ‘ಭಾರತ ಮಾತಾ ಕೀ ಜೈ’, ‘ಚಂದ್ರಯಾನ-3ಕ್ಕೆ ಜೈ’ ಎಂಬ ಘೋಷಣೆಗಳು ಮುಗಿಲು ಮುಟ್ಟಿದವು. ಬಳಗದ ಕಾರ್ಯದರ್ಶಿ ರಾಜಶೇಖರ ಬಿ.ಮರಡಿ, ಸದಸ್ಯರಾದ ಪರಮೇಶ್ವರ ಬಿ.ದೇಸಾಯಿ, ದೇವೇಂದ್ರಪ್ಪ ಗಣಮುಖಿ, ಕೃಷ್ಣೆಗೌಡ್, ಸಂಸ್ಥೆಯ ಉಪನ್ಯಾಸಕರಾದ ಪಾಯಲ್ ಹಿಬಾರೆ, ಪ್ರಿಯಾಂಕಾ ದೋಂಡಿ, ಯುವ ನಾಯಕ ಸೋಮಶೇಖರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…