ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಯುವ ಜನರ ಸಂಘಟಕ ಹಾಗೂ ಸಾಮಾಜಿಕ ಕಾಳಜಿಯುಳ್ಳ ಯುವ ನಾಯಕ ವಿಶಾಲ ನವರಂಗ ಅವರು ಅರೋಗ್ಯ ಸಮಿತಿಯ ನೂತನ ಅಧ್ಯಕ್ಷರಾಗಿ ಇಂದು ನೂತನ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾದರು.
ಪಾಲಿಕೆ ಸಭಾಂಗಣದಲ್ಲಿ ಸಭೆ ಸೇರಿದ್ದ ಪಾಲಿಕೆಯ ಮೇಯರ್, ಉಪ ಮೇಯರ್ ಹಾಗೂ ಸದಸ್ಯರು ಮತ್ತು ಅವರ ಅಭಿಮಾನಿಗಳು ಅವರನ್ನು ತುಂಬು ಹೃದಯದಿಂದ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಒಕ್ಕೂಟದ ಅಧ್ಯಕ್ಷ ಡಾ. ಅರುಣ್ ಕುಮಾರ್ ಕುರ್ನೆ ಹಾಗೂ ಗೌರವ ಅಧ್ಯಕ್ಷ ಡಾ. ಪ್ರಕಾಶ್ ಬಡಿಗೇರ್, ಡಾ. ಶಂಭುನಾಥ್ ನಾಡಿಗೇರಿ, ಡಾ. ಎಂ. ಬಿ. ಕಟ್ಟಿ, ಡಾ. ಸಂತೋಷ್ ಕಂಬಾರ, ಡಾ. ಕೆ. ಎಂ. ಕುಮಾರಸ್ವಾಮಿ, ಹಾಗೂ ಮತ್ತಿತರರು ಸನ್ಮಾನಿಸಿ ಅಭಿನಂದಿಸಿದರು.