ಅಮರಕಲಾ ಸ್ಟುಡಿಯೋ ಲೋಕಾರ್ಪಣೆ

0
50

ಕಲಬುರಗಿ: ಅಮರಕಲಾ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘವು ಸುಮಾರು ಎರಡು ದಶಕಗಳಿಗಿಂತಲೂ ಹೆಚ್ಚು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಗೀತ, ಸಾಹಿತ್ಯ ದೊಂದಿಗೆ ಕಲಾವಿದರಿಗೆ ವೇದಿಕೆ ಕೊಡುವದರೊಂದಿಗೆ ಹಲವಾರು ಪ್ರತಿಭೆ ಬೆಳೆಸಿರುವ ಕೀರ್ತಿ ಸಂಘಕ್ಕೆ ಸಲ್ಲುತ್ತದೆ ಎಂದು ಸಂಘದ ಅಧ್ಯಕ್ಷರು ಹಾಗೂ ಸಂಗೀತ ಕಲಾವಿದರಾದ ಅಮರಪ್ರಿಯ ಹಿರೇಮಠ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚು ಆಯೋಜನೆಗೊಳಿಸುವ ನಿಟ್ಟಿನಲ್ಲಿ ಈ ಭಾಗದ ಪ್ರತಿಭೆಗಳಿಗೆ ಹೆಚ್ಚು ಬೆಳಿಸಬೇಕೆಂಬ ಸಂಕಲ್ಪದಿಂದ ಇನ್ನೂ ಒಂದು ಹೆಜ್ಜೆ ಮುಂದೆ ಬಂದಿರುವುದು ಹೆಮ್ಮೆಯ ವಿಷಯ. ಈ ಭಾಗದ ಸಂಗೀತ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ಸಾಗಬೇಕೆಂಬ ಇಚ್ಛೆಯಿಂದ ದಿನಾಂಕ 27 ರಂದು ರವಿವಾರ ಸಾಯಂಕಾಲ 5:00 ಗಂಟೆಗೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಪ್ರಶಾಂತ ನಗರದಲ್ಲಿ ಅಮರಕಲಾ ಸ್ಟುಡಿಯೋ ಹಾಗೂ ಇವೆಂಟ್ ಮ್ಯಾನೇಜ್ಮೆಂಟ್ ಲೋಕಾರ್ಪಣೆಗೊಳ್ಳಲಿದೆ.

Contact Your\'s Advertisement; 9902492681

ಕಾರ್ಯಕ್ರಮದ ದಿವ್ಯ ಸಾನಿಧ್ಯ ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಸಿದ್ದನಕೊಳ್ಳ ಗ್ರಾಮದ ನಿರಂತರ ದಾಸೋಹ ಹಾಗೂ ಕಲಾಪೋಷಕ ಮಠದ ಪೀಠಾಧಿಪತಿಗಳಾದ ಪೂಜ್ಯರಾದ ಡಾ. ಶಿವಕುಮಾರ ಮಹಾ ಸ್ವಾಮಿಗಳು ವಹಿಸಲಿದ್ದಾರೆ. ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ನರಾದ ಪೂಜ್ಯ ಡಾ. ದಾಕ್ಷಾಯಿಣಿ ಎಸ್. ಅಪ್ಪ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ನೇತೃತ್ವ ಶ್ರೀ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ವಹಿಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜನಪರ ಹೋರಾಟಗಾರ ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ, ಕಾಯಕ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಸಂಜನಾ ಪಾಟೀಲ ಆಗಮಿಸಲಿದ್ದಾರೆ. ಸಂಘದ ಅಧ್ಯಕ್ಷರಾದ ಅಮರಪ್ರಿಯ ಹಿರೇಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯಲ್ಲಿ ಸೇವಾ ನಿವೃತ್ತಿ ಹೊಂದಿರುವ ಮಾಣಿಕ ನಾಗೊಂಡ, ಶ್ರೀದೇವಿ ವಿ. ಹಲಕಾವಟಗಿ ದೇವಕಿ ಬದ್ದು, ಗುರುಬಸಪ್ಪ ಪಾಟೀಲ, ಶಂಕರ ಬುಳ್ಳಾ ಇವರಿಗೆ ಗೌರವ ಸನ್ಮಾನ ನಡೆಯಲಿದೆ ಎಂದು ಅಧ್ಯಕ್ಷರಾದ ಅಮರಪ್ರಿಯ ಹಿರೇಮಠ ಪತ್ರಿಕೆ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ ಕಾರ್ಯಕ್ರಮದಲ್ಲಿ ಹಲವಾರೂ ಜನ ಕಲಾವಿದರಿಂದ ಸಂಗೀತ ಸೇವೆ ನೆರವೇರಲಿದೆ. ಅದಕ್ಕಾಗಿ ಸಂಗೀತ ಆಸಕ್ತರು, ಸಾಹಿತಿಗಳು, ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಂಡಿದ್ದಾ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here