ಕಲಬುರಗಿ: ಸ್ತಿತ್ವದಲ್ಲಿರುವ ಕಾರ್ಮಿಕ ಕಾನೂನುಗಳನ್ನು ಕಾರ್ಮಿಕ ಸಂಹಿತೆಗಳಲ್ಲಿ ಬೆರೆಸುವುದನ್ನು ವಿರೋಧಿಸಿ ಹಾಗೂ ಮಾರಾಟ ಪ್ರಚಾರ ನೌಕರರಿಗೆ ಎನ್‌ಪಿಇ ಕಾಯ್ದೆಯಡಿ ಶಾಸನಬದ್ಧ ಕೆಲಸದ ನಿಯಮಾವಳಿಗಳನ್ನು ಸೂಚಿಸುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ಸ್ಟೇಟ್ ಮೆಡಿಕಲ್ ಆಂಡ್ ಸೇಲ್ಸ್ ರಿಪ್ರಂಜಂಟೇಟಿವ್ ಅಸೋಸಿಯೇಶನ್ ನೇತೃತ್ವದಲ್ಲಿ ಔಷಧ ಮಾರಾಟ ಪ್ರತಿನಿಧಿಗಳು ಜಿಲ್ಲಾ ಕಾರ್ಮಿಕ ಕಚೇರಿಯ ಕಾರ್ಮಿಕ ಭವನದ ಮುಂದೆ ಧರಣಿ ಹಮ್ಮಿಕೊಂಡಿದ್ದರು.
ಸಿಐಟಿಯು ಪ್ರಧಾನ ಕಾರ್ಯದರ್ಶಿ ಅಶ್ಪಾಕ್, ಉಪಾಧ್ಯಕ್ಷ ಸಂಜೀವ್ ದೇಶಪಾಂಡೆ, ಆನಂದ್ ಎನ್.ಜೆ., ಪಾಂಡುರಂಗ್, ಮಹಾದೇವ್, ಶರಣಬಸಪ್ಪಾ ಉಪಳಾಂವ್ ಮುಂತಾದವರ ನೇತೃತ್ವದಲ್ಲಿ ಧರಣಿ ನಡೆಯಿತು.
ಪ್ರತಿಭಟನೆಕಾರರು ನಂತರ ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಕಾರ್ಮಿಕ ಸಂಹಿತೆಗಳನ್ನು ಅನುಷ್ಠಾನಕ್ಕೆ ತರದಿರುವಂತೆ ಒತ್ತಾಯಿಸಿದರು.
ಔದ್ಯೋಗಿಕ ಸುರಕ್ಷತೆ ಮತ್ತು ಕೆಲಸದ ನಿಯಮದ ಸಂಹಿತೆಯಡಿಯಲ್ಲಿ ೧೯೭೬ರಲ್ಲಿ ಜಾರಿಯಾದ ಎನ್‌ಪಿಇ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಪ್ರಸ್ತಾಪಿಸಲಾಗಿದೆ. ಈ ಬದಲಾವಣೆಯಿಂದ ಪ್ರಸ್ತುತದಲ್ಲಿರುವ ಮಾರಾಟ ಪ್ರಚಾರ ನೌಕರರ ಹಕ್ಕುಗಳನ್ನು ಮುಕ್ತಾಯಗೊಳಿಸಿದಂತಾಗುತ್ತದೆ ಎಂದು ಅವರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಮಾರಾಟ ಪ್ರಚಾರ ನೌಕರರಿಗೆ ಕಾನೂನುಬದ್ಧ ಕೆಲಸದ ನಿಯಮಾವಳಿಗಳು ಇಲ್ಲದ ಕಾರಣದಿಂದಾಗಿ ಅವ್ಯವಸ್ಥೆಗಳಿಂದ ವಿವಿಧ ಕೈಗಾರಿಕೆಗಳಲ್ಲಿರುವ ಮಾರಾಟ ಪ್ರಚಾರ ನೌಕರರು ಜೀವ ಕಳೆದುಕೊಂಡಿದ್ದಾರೆ. ಅನೇಕ ಯುವ ನೌಕರರು ಮಾರಾಟದ ಒತ್ತಡವನ್ನು ಎದುರಿಸಲಾಗದೇ ಬಲಿಯಾಗಿದ್ದಾರೆ. ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…