ಉತ್ತರ ಪ್ರದೇಶ, ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿರುವ ರೂಮಾ ರೈಲ್ವೆ ನಿಲ್ದಾಣದ ಸಮೀಪ ಪೂರ್ವಾ ಎಕ್ಸ್ಪ್ರೆಸ್ ರೈಲಿನ 12 ಬೋಗಿಗಳು ಹಳಿತಪ್ಪಿ ಪಲ್ಟಿಯಾಗಿದ ಘಟನೆ ರಾತ್ರಿ 1 ಗಂಟೆ ಸುಮಾರಾಗಿ ಸಂಭವಿಸಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ, ಸಮಿಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೌರಾ ಮತ್ತು ಹೊಸದಿಲ್ಲಿ ನಡುವೆ ಸಂಚರಿಸುತ್ತಿರುವ ಈ ರೈಲು ಅಲ್ಲಹಾಬಾದ್ (ಪ್ರಯಾಗರಾಜ್) ನಿಂದ ನವದೆಹಲಿಗೆ ಹೊರಡಿತ್ತು. ವೇಳೆ ರಾತ್ರಿ 1ಗಂಟೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಹಲವರಿಗೆ ಗಾಯಗಳಾಗಿವೆ, ಯಾವುದೇ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಈ ಘಟನೆ ಕಾನ್ಪುರದಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿ ನಡೆದಿದ್ದು, ರೈಲು ವೇಗವಾಗಿ ಚಲಿಸುವ ಸಮಯದಲ್ಲಿ. ಕಂಪ್ಲಿಂಗ್ ಮುರಿದಿದ್ದ ಚಲಿಸುತ್ತಿದ್ದ ರೈಲಿನ ಇಂಜಿನ್ ಹಾಗೂ ಮುಂದಿನ 5 ಬೋಗಿಗಳು ಮುಂದೆ ಸಾಗಿ 12 ಬೋಗಿಗಳು ಸಂಪರ್ಕ ಕಳೆದುಕೊಂಡ ಪರಿಣಾಮ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದ್ದು ನೀಖರವಾಗಿ ಕಾರಣ ತಿಳಿದುಬಂದಿಲ್ಲ.
ಅಪಘಾತದ ಮಾಹಿತಿ ಪಡೆದ ಸ್ಥಳೀಯ ಆಡಳಿತ ಮತ್ತು ರೈಲ್ವೆ ಆಡಳಿತವು ತಕ್ಷಣ ಸ್ಥಳಕ್ಕೆ ಧಾವಿಸಿದರವು. ರಕ್ಷಣಾ ಕಾರ್ಯಕ್ಕಾಗಿ ತಂಡವನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಈ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಲಿಲ್ಲ. 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಹತ್ತಿರದ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ಸಹಾಯವಾಣಿ ಸಂಖ್ಯೆ;
ಪ್ರಯಾಣಿಕರ ಬಗ್ಗೆ ವಿವರ ಮಾಹಿತಿ ಪಡೆಯಲು ಸಹಾಯವಾಗಿ ರೈಲ್ವೇ ಇಲಾಖೆ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಹೆಲ್ಪ್ಲೈನ್ ಸಂಖ್ಯೆ (033) 26402241, 26402242, 26402243, 26413660.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…