ಬಿಸಿ ಬಿಸಿ ಸುದ್ದಿ

ಲೋಕಸಭೆ ಚುನಾವಣೆ; 28 ಕ್ಷೇತ್ರಗಳಲ್ಲೂ ಜೆಡಿಎಸ್‌ ಕಣಕ್ಕೆ: ಹೆಚ್.ಡಿ.ಕುಮಾರಸ್ವಾಮಿ

ಹಾಸನ: ಆಪರೇಷನ್ ಹಸ್ತದ ಮೂಲಕ ಕಾಂಗ್ರೆಸ್ ನಾಯಕರು ಪ್ರತಿಪಕ್ಷಗಳನ್ನು ಹೆದರಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಸೊಪ್ಪು ಹಾಕುವ ಜಾಯಮಾನ ನಮ್ಮದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.

ಹಾಸನದಲ್ಲಿ ಇಂದು ಮಾಹಾಲಕ್ಷ್ಮೀ ಮಂಜಪ್ಪ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಆಪರೇಷನ್‌ ಹಸ್ತ ಮಾಡುತ್ತಿರುವವರಿಗೆ ಈಗಾಗಲೇ ಹೇಳಿದ್ದೇನೆ. ನಮ್ಮ ಪಕ್ಷದಿಂದ ಯಾರಾದರೂ ಬರುವವರು ಇದ್ದರೆ ಮೈಸೂರು ಪೇಟ ಹಾಕಿ ಶಾಲು ಹೊದಿಸಿ ಕರೆದುಕೊಂಡು ಹೋಗಿ ಅಂದಿದ್ದೀನಿ ಎಂದು ಟಾಂಗ್‌ ನೀಡಿದ ಅವರು; ನಿನ್ನೆ, ಮೊನ್ನೆ ಗೆದ್ದಂತಹ ಕಾಂಗ್ರೆಸ್ ಎಂಎಲ್‌ಎಗಳು ಇನ್ನು ಕ್ಷೇತ್ರವನ್ನೇ ಸುತ್ತಿಲ್ಲ. ಅಂತಹವರು ಸಹ ಇವತ್ತು ಜೆಡಿಎಸ್‌ನಿಂದ ಹತ್ತು, ಬಿಜೆಪಿಯಿಂದ ಹತ್ತು ಜನ ಶಾಸಕರು ಬರುತ್ತಾರೆ ಎಂದು ಹೇಳುತ್ತಿದ್ದಾರೆ. ಅದಕ್ಕೆ ಕರೆದುಕೊಂದು ಹೋಗಿ ಎಂದು ಹೇಳಿದ್ದೇನೆ ಎಂದರು ಅವರು.

ಬೇರೆ ಪಕ್ಷದ ಶಾಸಕರನ್ನು ಕಾಂಗ್ರೆಸ್ ಬಹಳ ಉಮೇದಿನಿಂದ ಸೆಳೆಯುತ್ತಿದೆ. ಸೆಲೀತಾ ಇರಲಿ, ಬೇರೆ ಪಕ್ಷದ ಶಾಸಕರನ್ನು ಸೆಳೆದು ಹಿಂದೆಲ್ಲಾ ಏನೇನಾಗಿದೆ ಎನ್ನುವುದು ಗೊತ್ತಿದೆ ಎಂದು ಮಾರ್ಮಿಕವಾಗಿ ಹೇಳಿದರು ಅವರು.

1999ರಲ್ಲಿ ಎಸ್.ಎಂ.ಕೃಷ್ಣ ಅವರು ನಮ್ಮಿಂದಲೇ ಐದು ಜನ, ಬಿಜೆಪಿಯಿಂದ ಹತ್ತು ಜನರನ್ನು ಕರೆದುಕೊಂಡು ‌ಹೋದರು. 2004ರಲ್ಲಿ ಎಲ್ಲಿ ಬಂದು ನಿಂತರು, 120-130 ಸೀಟುಗಳಿಂದ 62ಕ್ಕೆ ಕುಸಿದರು. ನಂತರ ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಐದು ವರ್ಷ ಅಧಿಕಾರ ನಡೆಸಿದರು. ನಂತರ 40 ಸ್ಥಾನಕ್ಕೆ ಬಂದರು.

ಇದೇ ಸಿದ್ದರಾಮಯ್ಯ ಅವರು 2013-2018ರಲ್ಲಿ ನಮ್ಮ ಪಕ್ಷದ‌ ಏಳೆಂಟು ಜನರನ್ನು ಕರೆದುಕೊಂಡು ಹೋದರು. ಕೊನೆಗೆ 78 ಸೀಟಿಗೆ ಬಂದು ನಿಂತರು. ಸರಕಾರ ಬಂದಾಗ ಇವೆಲ್ಲಾ ನಡೆಯುತ್ತಿರುತ್ತವೆ. ಇತ್ತೀಚಿನ ದಿನಗಳಲ್ಲಿ ನಿಷ್ಠೆ ಅನ್ನೋದು ಯಾರಿಗೂ ಇಲ್ಲಾ. ಇವತ್ತು ಯಾವುದೇ ಪಕ್ಷದಲ್ಲೂ ನಿಷ್ಠೆ ಅನ್ನೋದು ಉಳಿದಿಲ್ಲ. ನಮಗೆ ತಕ್ಷಣಕ್ಕೆ ಏನು ಸಿಗುತ್ತೆ ಅನ್ನೋದು ಎಲ್ಲರಿಗೂ ಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು ಮಾಜಿ ಮುಖ್ಯಮಂತ್ರಿಗಳು.

ಲೋಕಸಭೆ ಚುನಾವಣೆಯಲ್ಲಿ ಇಪ್ಪತ್ತು ಸೀಟು ಗೆಲ್ಲಬೇಕಾದರೆ ಎಲ್ಲರನ್ನೂ ತುಂಬಿಕೊಳ್ಳಬೇಕು. ಬಸ್ಸನ್ನು ಸಂಪೂರ್ಣ ಓವರ್ ಲೋಡ್ ಮಾಡಿಕೊಂಡು ಮುಂದಿನ ನಿಲ್ದಾಣದಲ್ಲಿ‌ ಇಳಿಯದಂತೆ ಬಿಗಿ ಮಾಡಿಕೊಳ್ಳಬೇಕು ಅಂತ ದಿನ ಹೇಳುತ್ತಿದ್ದಾರೆ ಆದರೆ ಮುಂದೆ ಏನೇನಾಗುತ್ತದೆ ಎನ್ನುವುದನ್ನು ಕಾಡು ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು ಅವರು.

ಚಂದ್ರಯಾನದಲ್ಲೂ ರಾಜಕೀಯ: ಎರಡೂ ರಾಷ್ಟ್ರೀಯ ಪಕ್ಷಗಳು ಚಂದ್ರಯಾನದ ವಿಷಯದಲ್ಲೂ ರಾಜಕೀಯ ಮಾಡುತ್ತಿವೆ. ಅವಿರತ ಶ್ರಮದಿಂದ ಯಶಸ್ಸು ಸಾಧಿಸಿದ್ದು ವಿಜ್ಞಾನಿಗಳು, ಇವರು ಮಾತ್ರ ಅದರಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು ಕುಮಾರಸ್ವಾಮಿ ಅವರು.

ಮಾಧ್ಯಮಗಳ ಮೂಲಕ ಗಮನಿಸುತ್ತಿದ್ದೇನೆ. ಚಂದ್ರಯಾನದ ಬಗ್ಗೆ ಕಾಂಗ್ರೆಸ್-ಬಿಜೆಪಿಯವರ ನಡುವೆ ಪೈಪೋಟಿ ಶುರುವಾಗಿದೆ. ಚಂದ್ರಯಾನಕ್ಕೆ ತಮ್ಮ ಪಕ್ಷದ್ದು ದೊಡ್ಡಮಟ್ಟದ ಕೊಡುಗೆ ಇದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಇನ್ನೊಂದು ಕಡೆ ನಮ್ಮದೇನೂ ಕಡಿಮೆ ಇಲ್ಲ ಎಂದು ಬಿಜೆಪಿಯವರು ಹೇಳಿಕೊಳ್ಳುತ್ತಿದ್ದಾರೆ. ಎರಡು ದಿನಗಳಿಂದ ಇಲ್ಲೇ ನಡಿಯುತ್ತಿದೆಯೆಲ್ಲಾ ರಾಜಕೀಯ! ಚಂದ್ರಯಾನ ವಿಷಯದಲ್ಲಿ ಕೇಂದ್ರ ಸರಕಾರಕ್ಕಿಂತ ಮೊದಲೇ ಕರ್ನಾಟಕ ಸರಕಾರದ ದೊಡ್ಡ ಜಾಹೀರಾತು ಬಂತು. ಈಗ ಪೈಪೋಟಿ ಮೇಲೆ ಕೇಂದ್ರ ಸರಕಾರದಿಂದಲೂ ಜಾಹೀರಾತು ಕೊಡುತ್ತಾರೆ. ವಿಜ್ಞಾನಿಗಳ ಪರಿಶ್ರಮದ ದಾಖಲೆ ಎನ್ನುವುದೇನಿದೆ, ಅದಕ್ಕೂ ಮೈಲೇಜ್‌ ತೆಗೆದುಕೊಳ್ಳಲು ಪೈಪೋಟಿ ನಡೆದಿದೆ. ಇದಕ್ಕೂ ನಿಜಕ್ಕೂ ಬೇಸರದ ಸಂಗತಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ:ಮುಂ ಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ ಎಲ್ಲಾ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸುತ್ತದೆ ಎಂದು ಇದೇ ವೇಳೆ ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಎಲ್ಲಾ 28 ಕ್ಷೇತ್ರಗಳಲ್ಲಿ ನಾವು ಗೆದ್ದುಬಿಡ್ತಿವಿ ಅಂತ ನಾನು ಹೇಳಲ್ಲ. ನಾವು ನಾಲ್ಕೈದು ಸ್ಥಾನ ಗೆಲ್ಲುವ ಅವಕಾಶವಿದೆ. ಮುಂದಿನ‌ ದಿನಗಳಲ್ಲೂ ‌ನಮ್ಮ ಪಕ್ಷದ ಕಾರ್ಯಕರ್ತರನ್ನು ನಾನು ಉಳಿಸಬೇಕು. ಕಾರ್ಯಕರ್ತರನ್ನು ಉಳಿಸಿಕೊಳ್ಳಲು, ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಾವು ನಮ್ಮ ಪಕ್ಷದ ಕಾರ್ಯಕರ್ತರ ದುಡಿಮೆಗೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವವಾಗಬಾರದು. ಆ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳುತ್ತಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು; ನಾವಂತೂ ಯಾರ ಹತ್ತಿರವೂ ಮೈತ್ರಿ ಚರ್ಚೆಗೆ ಹೋಗಿಲ್ಲ. ಇದು ಹೊರಗಡೆ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಯಷ್ಟೇ. ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿ ವೋಟರ್ ಸೇರಿ ಹಲವಾರು ಸರ್ವೆ ರಿಪೋರ್ಟ್‌ಗಳು ಆಗಲೇ ಬರುತ್ತಿವೆ. ಬಿಜೆಪಿಯವರು 24-25 ಗೆಲ್ಲುತ್ತಾರೆ, ಕಾಂಗ್ರೆಸ್ 5 ಸೀಟು ಗೆಲ್ಲುತ್ತದೆ ಎಂದು ಸಮೀಕ್ಷೆಗಳು ಬರುತ್ತಿವೆ. ಹೀಗಿರುವಾಗ ಬಿಜೆಪಿಯವರಿಗೆ ನಮ್ಮ ಜತೆ ಹೊಂದಾಣಿಕೆ ಅವಶ್ಯಕತೆ ಏನಿದೆ?
ಅವರೇ ಸ್ವತಂತ್ರವಾಗಿ 24-25 ಸೀಟ್ ಗೆಲ್ಲುವುದಾದರೆ ಬಿಜೆಪಿಗೆ ನಮ್ಮ ಅವಶ್ಯಕತೆ ಇಲ್ಲವಲ್ಲ. ಇನ್ನು; ಕಾಂಗ್ರೆಸ್‌ ನವರಿಗೆ ನಮ್ಮ ಅವಶ್ಯಕತೆ ಇಲ್ಲವೇ ಇಲ್ಲ ಬಿಡಿ. ಅವರೂ ಇಪ್ಪತ್ತು ಸೀಟು ಗೆಲ್ಲುತ್ತೇವೆ ಎನ್ನುತ್ತಿದ್ದಾರೆ. ಹೀಗಾಗಿ ಯಾರ ಜತೆಯೂ ಮೈತ್ರಿಯ ವಿಚಾರ ನಮ್ಮ ಮುಂದೆ ಇಲ್ಲ ಎಂದರು.

ಎರಡೂ ಪಕ್ಷಗಳು ದೊಡ್ಡದಾಗಿ ಬೆಳೆದಿವೆ. ಆರ್ಥಿವಾಗಿ ಬಲಿಷ್ಠವಾಗಿವೆ. ನಾವು ಕಾರ್ಯಕರ್ತರ ಪಡೆಯೊಂದಿಗೆ ಯಾವ ರೀತಿ ಹೋಗಬೇಕು, ಯಾವ ರೀತಿ ಸಂಘಟನೆ ಮಾಡಬೇಕೋ ಅದನ್ನು ಮಾಡುತ್ತಿದ್ದೇವೆ. ಈಗಾಗಲೇ ಪಕ್ಷದ ಹೊಸ ಕೋರ್ ಕಮಿಟಿ ರಚನೆ ಮಾಡಿದ್ದೇವೆ. ಶೀಘ್ರವೇ ಜನಪರ ವಿಷಗಳನ್ನು ಇಟ್ಟುಕೊಂಡು ರಾಜ್ಯದ ಪ್ರವಾಸ ಮಾಡುತ್ತೇವೆ ಎಂದರು ಅವರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

2 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

2 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

2 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

2 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

2 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

2 hours ago