ಕಲಬುರಗಿ: ಪುರೋಹಿತರು ಹಾಗೂ ಅರ್ಚಕರಿಗೆ ದಲ್ಲಾಳಿ ಎಂದು ಅವಹೇಳನಗೈದಿರುವ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ್ ಸ್ವಾಮೀಜಿ ಅವರು ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದು ಬಹಿರಂಗ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಅಧ್ಯಕ್ಷ ವೇದಮೂರ್ತಿ ಭದ್ರಯ್ಯಸ್ವಾಮಿ ಸಾಲಿಮಠ್ ಅವರು ಇಲ್ಲಿ ಎಚ್ಚರಿಸಿದರು.
ಗುರುವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪೂರ್ ಜಿಲ್ಲೆಯ ಮುದ್ದೆಬಿಹಾಳದಲ್ಲಿ ಜರುಗಿದ ಧಾರ್ಮಿಕ ಸಮಾರಂಭದಲ್ಲಿ ಜಯಮೃತ್ಯಂಜಯ್ ಸ್ವಾಮೀಜಿ ಅರ್ಚಕರಿಗೆ ಮತ್ತು ಪುರೋಹಿತರಿಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿದರು. ಎಲ್ಲ ಸಮಾಜದ ಅರ್ಚಕರು ಹಾಗೂ ಪುರೋಹಿತರಿಗೆ ದಲ್ಲಾಳಿಗಳೆಂದು ಹೇಳಿಕೆ ನೀಡಿದ್ದು ಅವಮಾನಕಾರಿಯಾಗಿದೆ. ಓರ್ವ ಪೀಠಾಧಿಪತಿಗಳಾಗಿ ಸಮಾಜದ ಬಹುಮುಖ್ಯ ಸ್ಥಾನದಲ್ಲಿದ್ದುಕೊಂಡು ಯಾವುದೇ ವೃತ್ತಿಯ ಕುರಿತು ಹೀನಾಯವಾಗಿ ಮಾತನಾಡುವುದು ಅವರಿಗೆ ಶೋಭೆಯಲ್ಲ ಎಂದು ಅವರು ಹೇಳಿದರು.
ಕಳೆದ ವರ್ಷ ಶ್ರಾವಣ ಮಾಸದಲ್ಲಿ ಸಹ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. ಆಗಲೂ ಸಹ ಆ ರೀತಿ ಪುನರಾವರ್ತನೆಯಾಗದಂತೆ ಎಚ್ಚರಿಕೆ ನೀಡಲಾಗಿತ್ತು. ಈಗಲೂ ಸಹ ಸ್ವಾಮೀಜಿ ಮತ್ತೆ ಮೊದಲಿನ ಹಳೆಯ ಚಾಳಿಯನ್ನು ಮುಂದುವರೆಸಿದ್ದಾರೆ. ಇನ್ನು ಸಹಿಸಲಾಗದು ಎಂದು ಅವರು ತಿಳಿಸಿದರು. ಕೂಡಲೇ ಕೊಟ್ಟ ಹೇಳಿಕೆಯನ್ನು ಹಿಂಪಡೆದು ಬಹಿರಂಗ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಸಂಘವು ಮುಂದಿನ ದಿನಗಳಲ್ಲಿ ಸಭೆ ಸೇರಿ ಹೋರಾಟದ ರೂಪುರೇಷೆ ಸಿದ್ದಪಡಿಸಲಿದೆ ಎಂದು ಅವರು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಗಂಗಾಧರ್ ಸ್ವಾಮಿ ಅಗ್ಗಿಮಠ್, ಸಿದ್ದೇಶ್ವರ್ ಸ್ವಾಮಿ ಹಿರೇಮಠ್, ಶ್ರೀಶೈಲ್ ಸ್ವಾಮಿ, ಕರಣಯ್ಯಸ್ವಾಮಿ, ವಿಜಯಕುಮಾರ್ ಸ್ವಾಮಿ, ಸಿದ್ದಯ್ಯಸ್ವಾಮಿ ನೀಲಾ, ಚನವೀರಯಯ್ಯ ಬೀರನಳ್ಳಿ, ಮಹೇಶ್ ಶಾಸ್ತ್ರಿಗಳು, ಬಸವರಾಜ್ ಕಲಗುರ್ತಿಮಠ್, ಜಗಯ್ಯಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…