ಚೈಲ್ಡ್ ಹೆಲ್ತ್ ಆಕ್ಟಿವ್ ಫಾರ್ ಇಂಪ್ರೂವ್ಡ್ ನ್ಯೂಟ್ರಿಷನ್ (ಚೈನ್) ತರಬೇತಿ

0
112

ಕಲಬುರಗಿ ನಗರದ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಅಳಂದ ಮತ್ತು ತಾಲೂಕಿನ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆದ ಚೈಲ್ಡ್ ಹೆಲ್ತ್ ಆಕ್ಟಿವ್ ಫಾರ್ ಇಂಪ್ರೂವ್ಡ್ ನ್ಯೂಟ್ರಿಷನ್ (ಚೈನ್) ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕು. ಕ. ಅಧಿಕಾರಿಗಳಾದ ಡಾ. ರಾಜಶೇಖರ ಮಾಲಿ ರವರು ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿದರು.

ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ. ರವಿಕಂತಿ ಕ್ಯಾತನಾಳ, ಜಿಲ್ಲಾ ಉಪ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸೋಮು ರಾಠೋಡ, ಕಾರ್ಯಕ್ರಮ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಗೊಬ್ಬರ (ಬಿ) ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ ಬಳೆ. ಹಾಗೂ ಮಹಾದೇವಿ ಹತ್ತಿ, ಸೂರ್ಯಕಾಂತ್ ಸಾವಳಗಿ, ತರಬೇತಿ ನೀಡಿದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಜಿಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಯೋಜಕರಾದ ಪ್ರತಿಭಾ, ಆರೋಗ್ಯ ಶಿಕ್ಷಣಾಧಿಕಾರಿಗಳ .ಸಂಘದ ಅಧ್ಯಕ್ಷರಾದ ಸೋಮಶೇಖರ್ ಮದನ್ ಕರ್, ತಾಲೂಕ ಶಿಕ್ಷಣಾಧಿಕಾರಿಗಳಾದ ವಿಜಯಲಕ್ಷ್ಮಿ ನಂದಿ ಕೋಲ್ಮಠ , ಶರಣಮ್ಮ ಉಪಸ್ಥಿತರಿದ್ದರು. ಆಳಂದ ತಾಲೂಕ ಹಾಗೂ ಕಲ್ಬುರ್ಗಿ ತಾಲೂಕುಗಳ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳು ತರಬೇತಿಯನ್ನು ಪಡೆದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here