ಶ್ರೇಷ್ಠ ಹಾಕಿ ಪಟು ಧ್ಯಾನ ಚಂದ್: ಪ್ರೊ, ದಯಾನಂದ ಅಗಸರ್

0
50

ಕಲಬುರಗಿ: ಮೇಜರ್ ಧ್ಯಾನ್ ಚಂದ್ ಸಿಂಗ್ ಭಾರತವಷ್ಟೇ ಅಲ್ಲ, ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಹಾಕಿ ಪಟು. ಇಡೀ ಪ್ರಪಂಚದಲ್ಲಿಯೇ ಇಲ್ಲಿಯವರೆಗೆ ಇವರನ್ನು ಸರಿಗಟ್ಟುವ ಯಾವ ಆಟಗಾರನೂ ಇಲ್ಲ ಎಂಬುದು ಅಚ್ಚರಿಯ ಸಂಗತಿ ಎಂದು ಕುಲಪತಿ ಪ್ರೊ, ದಯಾನಂದ ಅಗಸರ್ ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದಲ್ಲಿ ಮೇಜರ್ ಧ್ಯಾನ್ ಚಂದ್ ಅವರ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ನನ್ನು ಬೆರಗುಗೊಳಿಸಿದ ಕ್ರೀಡಾ ಮಾಂತ್ರಿಕ. ಭಾರತ ಸರ್ಕಾರವು ಇವರಿಗೆ ‘ಪದ್ಮ ವಿಭೂಷಣ’ ಪ್ರಶಸ್ತಿಯನ್ನು ನೀಡಿದೆ. ಎಂದು ಅವರು ಹೇಳಿದರು.

Contact Your\'s Advertisement; 9902492681

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೈಹಿಕ ಶಿಕ್ಷಣ ವಿಭಾಗದ ಸಂಯೋಜನಾಧಿಕಾರಿ ಡಾ. ಎಚ್ ಎಸ್ ಜಂಗೆ ವಹಿಸಿದ್ದರು, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್. ಜಿ. ಕಣ್ಣೂರ, ಅತಿಥಿ ಉಪನ್ಯಾಸಕ ಡಾ. ಗಿರೀಶ ಜಂಗೆ, ಡಾ. ವಿಶಾಲ ಸಜ್ಜನ, ಮತ್ತು ಸಂಶೋಧನಾ ವಿದ್ಯಾರ್ಥಿಗಳು ಇತರರು ಹಾಜರಿದ್ದರು.

ಸಾವಿರ ಗೋಲುಗಳ ಸರ್ದಾರ್ ಆಗಿದ್ದ ಮೇಜರ್ ಧ್ಯಾನ್ ಚಂದ್. ದೈಹಿಕ ಶಿಕ್ಷಣ ವಿದ್ಯಾರ್ಥಿಗಳು ಸತತ ಪರಿಶ್ರಮ ಇದ್ದರೆ ಜೀವನದಲ್ಲಿ ಏನಾದರೂ ಸಾಧನೆ ಮಾಡಬಹುದು. ಯಾವುದೇ ಕ್ರೀಡೆ ಆಡಿದರು ಅದರಲ್ಲಿ ಏಕಾಗ್ರತೆ ಬಹಳ ಮುಖ್ಯ. ಆಗ ಗುರಿ ತಲುಪಲು ಸಾಧ್ಯ. – ಡಾ. ಎಚ್ ಎಸ್ ಜಂಗೆ, ಸಂಯೋಜನಾಧಿಕಾರಿಗಳು, ದೈಹಿಕ ಶಿಕ್ಷಣ ವಿಭಾಗ ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರಗಿ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here