ಕಲಬುರಿಗಯಲ್ಲಿ ಗೃಹ ಲಕ್ಷ್ಮೀ ಯೋಜನೆಯಲ್ಲಿ 4,77,261 ಜನ ನೋಂದಣಿ

ಕಲಬುರಗಿ,ಆ.29; ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಮನೆಯೊಡತಿಗೆ ಮಾಸಿಕ‌ 2,000 ಒದಗಿಸುವ “ಗೃಹ ಲಕ್ಷ್ಮೀ” ಜನಪ್ರಿಯ ಯೋಜನೆಗೆ ಆಗಸ್ಟ್ 30 ರಂದು (ಬುಧವಾರ) ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಲನೆ‌ ನೀಡಲಿದ್ದಾರೆ.

ಆಗಸ್ಟ್ 28ರ ವರೆಗೆ ಜಿಲ್ಲೆಯಲ್ಲಿ ಅಫಜಲಪೂರ-41,553, ಆಳಂದ-57,735, ಚಿಂಚೋಳಿ-45,520, ಚಿತ್ತಾಪೂರ-42,516, ಕಾಳಗಿ-23,207, ಕಲಬುರಗಿ-1,28,179, ಜೇವರ್ಗಿ-35,058,  ಯಡ್ರಾಮಿ-23,338, ಸೇಡಂ-39,209, ಕಮಲಾಪೂರ-29,089, ಶಹಾಬಾದ-7,069 ಸೇರಿದಂತೆ ಜಿಲ್ಲೆಯಾದ್ಯಂತ ನಿಗದಿತ ಗುರಿ 5,89,105 ಪೈಕಿ 4,77,261 ಫಲಾನುಭವಿಗಳು (ಶೇ.81.04) ನೋಂದಣಿ ಮಾಡಿಕೊಂಡಿದ್ದಾರೆ. ಬುಧವಾರದಿಂದ ಈ ಎಲ್ಲಾ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ 2,000 ರೂ. ಹಣ ವರ್ಗಾವಣೆಗೆ ಚಾಲನೆ ನೀಡಲಾಗುತ್ತದೆ ಎಂದು ಕಲಬುರಗಿ ಜಿಲ್ಲಾಧಿಕಾರಿ‌ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಮನೆಯೊಡತಿಗೆ ಮಾಸಿಕ‌ 2,000 ಒದಗಿಸುವ “ಗೃಹ ಲಕ್ಷ್ಮೀ” ಜನಪ್ರಿಯ ಯೋಜನೆಗೆ ಆಗಸ್ಟ್ 30 ರಂದು (ಬುಧವಾರ) ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಲನೆ‌ ನೀಡಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆಳಂದ ರಸ್ತೆಯಲ್ಲಿರುವ ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯತ  ವ್ಯಾಪ್ತಿಯ ಬಂಗರಗಾ ಕಲ್ಯಾಣ ಮಂಟಪದಲ್ಲಿ ನಡೆಯುವ ಚಾಲನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಡಿ.ಸಿ. ತಿಳಿಸಿದ್ದಾರೆ.

ಜಿಲ್ಲೆಯ 261 ಗ್ರಾಮ ಪಂಚಾಯತಿ‌ ಕೇಂದ್ರಸ್ಥಾನದಲ್ಲಿ ಮತ್ತು ನಗರ-ಸ್ಥಳೀಯ ಸಂಸ್ಥೆಗಳ 52 ವಾರ್ಡ್ ಸೇರಿದಂತೆ ಒಟ್ಟು 313  ಕಡೆ ಗೃಹ ಲಕ್ಷ್ಮೀ ಚಾಲನಾ ಕಾರ್ಯಕ್ರಮ ನೇರ ಪ್ರಸಾರ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗೃಹ ಲಕ್ಷ್ಮೀ ಚಾಲನಾ ಕಾರ್ಯಕ್ರಮವು ಸಮುದಾಯ ಭವನ, ಕಲ್ಯಾಣ ಮಂಟಪ, ಚೌಟ್ರಿಯಲ್ಲಿ ಇಲ್ಲವೆ ಬಯಲು ಪ್ರದೇಶದಲ್ಲಿ  ಆಯೋಜಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಬರುವ ಫಲಾನುಭವಿ, ಸಾರ್ವಜನಿಕರಿಗೆ  ಆಸನ ವ್ಯವಸ್ಥೆ, ಕುಡಿಯುವ ನೀರು, ಲಘು ಉಪಹಾರ ಪೂರೈಸಲಾಗುತ್ತಿದೆ ಎಂದರು.

ಕಾರ್ಯಕ್ರಮದ ಲೈವ್ ಸ್ಟ್ರೀಮಿಂಗ್ ವ್ಯವಸ್ಥೆಗೆ ಎಲ್ಲಾ ಕಾರ್ಯಕ್ರಮ ಸ್ಥಳಗಳಲ್ಲಿ ಎಲ್.ಇ.ಡಿ ವಾಲ್‌, ಸ್ಕ್ರೀನ್ ವ್ಯವಸ್ಥೆ, ಧ್ವನಿವರ್ಧಕ ಅಳವಡಿಸಿ ಇದರ ನಿರ್ವಹಣೆಗೆ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮ ಸುಲಲಿತವಾಗಿ ನಡೆಯಲು ಪ್ರತಿ ಕಾರ್ಯಕ್ರಮ ಸ್ಥಳದಲ್ಲಿ ಓರ್ವ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿಸಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420