ನುಡಿದಂತೆ ನಡೆದಿದ್ದೇವೆ: ಸಚಿವ ಪ್ರಿಯಾಂಕ್ ಖರ್ಗೆ

0
16

ಕಲಬುರಗಿ: ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ರಾಜ್ಯದ ಜನರ ಸಮಸ್ಯೆಗಳನ್ನು ಅರಿತ ನಂತರ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತು. ಅಂದು ಮಾಡಿದ ಘೋಷಣೆಯನ್ನು ನಮ್ಮ ಸರ್ಕಾರ ಇಂದು‌ ಜಾರಿಗೆ ತಂದು ನುಡಿದಂತೆ ನಡೆದುಕೊಂಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಹೊರವಲಯದ ಭೀಮಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಬಂಗರಗಾ ಕಲ್ಯಾಣ ಮಂಟಪದಲ್ಲಿ ನಡೆದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಸದೃಢತೆ ಒದಗಿಸುವ ಹಿನ್ನೆಲೆಯಲ್ಲಿ ಈ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ರೂಪಿಸಿದೆ. ಶಕ್ತಿ ಯೋಜನೆಯಡಿಯಲ್ಲಿ ದಿನನಿತ್ಯ ಸುಮಾರು 60 ಲಕ್ಷ ಮಹಿಳೆಯರು ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ರಾಜ್ಯದ 70 ಲಕ್ಷ ಮನೆಗಳಿಗೆ ವಿದ್ಯುತ್ ‌ಸರಬರಾಜು ಮಾಡಲಾಗುತ್ತಿದೆ. ಅನ್ನ ಭಾಗ್ಯ ಯೋಜನೆಯಡಿಯಲ್ಲಿ ರಾಜ್ಯದ ಸುಮಾರು 4.47 ಕೋಟಿ ಫಲಾನುಭವಿಗಳು ಐದು ಕೆಜಿ ಅಕ್ಕಿಯನ್ನು ಉಚಿತವಾಗಿ ಅಥವಾ ಅಕ್ಕಿ‌ ಖರೀದಿಗೆ ಹಣ ಪಡೆದುಕೊಳ್ಳುತ್ತಿದ್ದಾರೆ‌. ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಯಜಮಾನಿ ತಿಂಗಳಿಗೆ ರೂ 2000 ಪಡೆಯಲಿದ್ದಾರೆ. ಜಿಲ್ಲೆಯಲ್ಲಿ 4.72 ಲಕ್ಷ ಹಾಗೂ ರಾಜ್ಯದಲ್ಲಿ 1.28 ಕೋಟಿ ನೋಂದಾಯಿತ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ನಾಲ್ಕು ಗ್ಯಾರಂಟಿಗಳನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಆದರೆ ವಿರೋಧಪಕ್ಷ ಬಿಜೆಪಿಗರಿಗೆ ಈ ಯೋಜನೆಗಳನ್ನು ಜಾರಿಗೆ ತರಲು ವಿರೋಧಿಸುತ್ತಿದ್ದಾರೆ. ಈ ಬಗ್ಗೆ ಜನರು ಗಮನಹರಿಸದೆ ನಮ್ಮ ಸರ್ಕಾರವನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ವೇದಿಕೆಯ ಮೇಲೆ ಶಾಸಕ ಅಲ್ಲಮಪ್ರಭು ಪಾಟೀಲ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here