ಬಿಸಿ ಬಿಸಿ ಸುದ್ದಿ

ನನಗೆ ಸಿಕ್ಕ ಗೌರವ ಸ್ತ್ರೀ ಕುಲಕ್ಕೆ ಸಿಕ್ಕಂತೆ: ಮಾತೋಶ್ರೀ ದಾಕ್ಷಾಯಿಣಿ ಅವ್ವಾಜೀ

ಕಲಬುರಗಿ: ಅಕ್ಕಸಮ್ಮೇಳನದಲ್ಲಿ ಕಾಯಕ, ಸಮಾಧಾನ, ಶಾಂತಿ ಸಂಸ್ಕೃತಿ, ಸತ್ಯ, ಧರ್ಮ, ನಿಷ್ಠೆ ಇತ್ಯಾದಿ ಶರಣರ ತತ್ವಗಳಿಂದ ಉಡಿ ತುಂಬಿ ಕಳುಹಿಸಿದ್ದಾರೆ ಅಲ್ಲಿ ನನ್ನಗೆ ಸಿಕ್ಕ ಗೌರವ, ಸನ್ಮಾನ ಇಡೀ ಸ್ತ್ರೀ ಕುಲಕ್ಕೆ ಸಿಕ್ಕ ಗೌರವವಾಗಿದೆ ಎಂದು ಪೂಜ್ಯ ಮಾತೋಶ್ರೀ ದಾಕ್ಷಾಯಿಣಿ ಎಸ್ ಅಪ್ಪ ಅವರು ಅಭಿಪ್ರಾಯ ಪಟ್ಟರು.

ನಗರದ ಶರಣಬಸವ ಶತಮಾನೋತ್ಸವ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನನ್ನೆಲ್ಲ ಕಾರ್ಯಕ್ಕೆ ಪೂಜ್ಯ ಅಪ್ಪಾಜಿ ಅವರೇ ಸ್ಫೂರ್ತಿದಾಯಕರಾಗಿದ್ದಾರೆ. ಇಂದು ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ, ಭಾಹ್ಯಕಾಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆ ಸಾಧಿಸಿದ್ದಾಳೆ ಎಂದು ನುಡಿದರು. ಶರಣಬಸವೇಶ್ವರ ಸಂಸ್ಥಾನದ ಅಧ್ಯಕ್ಷರಾದ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಸ್ತ್ರೀ ಶಾಂತಿ, ಸಹನೆ, ಪ್ರೀತಿ, ವಾತ್ಸಲ್ಯದ ಮೂರ್ತಿಯಾಗಿದ್ದಾಳೆ. ಈ ಸಂಸ್ಥೆಯಲ್ಲಿ ಅತೀ ಹೆಚ್ಚು ಹೆಣ್ಣು ಮಕ್ಕಳು ಶೈಕ್ಷಣಿಕ ಪ್ರವೇಶ ಪಡೆಯುವುದಲ್ಲದೇ, ಪತ್ರಿ ಪರೀಕ್ಷೆಯ ಫಲಿತಾಂಶದಲ್ಲಿಯೂ ಅವರೇ ಮೇಲು ಗೈ ಸಾಧಿಸಿ ತಮ್ಮದೇ ಆದ ಛಾಪ ಮೂಡಿಸಿದ್ದಾರೆ ಎಂದು ತಿಳಿಸಿದರು.

ಸರ್ಕಾರಿ ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳಿಗೆ ನೀಡುವ ಸೌಲಭ್ಯಗಳನ್ನು ನಮ್ಮ ಸಂಸ್ಥೆಯಲ್ಲಿಯೂ ನೀಡಲಾಗುತ್ತದೆ. ನಮ್ಮ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಿದ ಕಾರಣದಿಂದ, ನಾನು ಶೈಕ್ಷಣಿಕ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಹೇಳಿದರು. ವಿವಿ ಕುಲಪತಿ ಡಾ. ನಿರಂಜನ್ ನಿಷ್ಠಿ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಸ್ತ್ರೀ ಸಬಲಿಕರಣವಾಗಿದೆ ಎಂದು ಅರ್ಥೈಸಿಕೊಳ್ಳಲು ಈ ಕಾರ್ಯಕ್ರಮ ಸಾಕ್ಷಿಯಾಗಿದೆ. ದೇವತೆಗಳ ಅಧಿಪತಿಯಾಗಿದ್ದಾಳೆ ಮಹಿಳೆ. ಹಣಕಾಸು ರೂಪದಲ್ಲಿ ಲಕ್ಷ್ಮಿದೇವಿ, ವಿದ್ಯೆ ರೂಪದಲ್ಲಿ ಸರಸ್ವತಿ ಮುಂತಾದ ಮಹತ್ವದ ಪಾತ್ರದಲ್ಲಿ ಮಹಿಳೆ ಸ್ಥಾನವನ್ನು ಕಾಣುತ್ತೇವೆ. ಈ ನಮ್ಮ ಶರಣ ಸಂಸ್ಥಾನ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಆ ಕಾರ್ಯವನ್ನು ಸಾಧಿಸಿ ತೋರಿಸಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಬಸವ ಸಮಿತಿಯ ಕಲಬುರಗಿ ಘಟಕದ ಅಧ್ಯಕ್ಷರಾದ ಡಾ. ವಿಲಾಸವತಿ ಖೂಬಾ ಮಾತನಾಡಿ, ಎಲ್ಲಾ ಹೆಣ್ಣು ಮಕ್ಕಳು ಒಂದಲ್ಲ ಒಂದು ಶಕ್ತಿ ಹೊಂದಿರುತ್ತಾರೆ. ಅಂತಹ ಅದ್ಭುತ ಶಕ್ತಿಯಾದ ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ ಧರ್ಮಪತ್ನಿ, ೯ನೇ ಪೀಠಾಧಿಪತಿಯ ತಾಯಿಯಾದ ದಾಕ್ಷಾಯಿಣಿ ಅವ್ವ ಅವರನ್ನು ನಮ್ಮ ಅಕ್ಕ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮಾಡಿರುವುದು ನಮ್ಮೆಲ್ಲರ ಧನ್ಯ ಎಂದು ತಿಳಿಸಿದರು. ಬಸವ ಸಮಿತಿಯ ಕಲಬುರಗಿ ಘಟಕದ ಉಪಾಧ್ಯಕ್ಷರಾದ ಡಾ. ಜಯಶ್ರೀ ದಂಡೆ ಮಾತನಾಡಿ, ಶ್ರೀ ಶರಣಬಸವೇಶ್ವರರು ಈ ನೆಲವನ್ನು ಕೈಲಾಸವನ್ನಾಗಿ ಮಾಡಿದ್ದಾರೆ. ಈ ಕಾಯಕವನ್ನು ಇನ್ನೂ ಈ ಪೀಠಪರಂಪರೆ ಮುಂದು ವರೆಸಿಕೊಂಡು ಹೋಗುತ್ತಿದ್ದಾರೆ ಎಂದು ತಿಳಿಸಿದರು.

ಚಿ.ದೊಡ್ಡಪ್ಪ ಅಪ್ಪಾ ತಮ್ಮನವರು, ಸಹೋದರಿ ಕೋಮಲಾ ಎಸ್. ಅಪ್ಪಾ, ಶಿವಾನಿ ಎಸ್. ಅಪ್ಪಾ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ನೇತೃತ್ವ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ವ್ಹಿ. ನಿಷ್ಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಕುಲಪತಿ ಡಾ.ವಿ.ಡಿ.ಮೈತ್ರಿ, ವಿವಿ ಕುಲಸಚಿವ ಡಾ.ಅನೀಲಕುಮಾರ ಬಿಡವೆ, ವಿವಿ. ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡೀನ್ ಡಾ.ಲಕ್ಷ್ಮಿ ಮಾಕಾ ಭಾಗವಹಿಸಿದರು.

ಭಾಲ್ಕಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಡಾ. ಗೀತಾ ಈಶ್ವರ ಖಂಡೆ, ಮಹಾದೇವಿ ಅಕ್ಕಗಳ ಸಮ್ಮೇಳನದ ಗೌರವಾಧ್ಯಕ್ಷರಾದ ಶರಣಮ್ಮ ಕಲಬುರಗಿ, ಮಹಾದೇವಿ ಅಕ್ಕಗಳ ಸಮ್ಮೆಳನದ ಕಾರ್ಯದರ್ಶಿ ಅನುಸುಯಾ ನಡಕಟ್ಟಿ ಉಪಸ್ಥಿತರಿದ್ದರು. ಡಾ.ಪುಟ್ಟಮಣಿ ದೇವಿದಾಸ ನಿರೂಪಿಸಿದರು. ಡಾ.ಸೀಮಾ ಪಾಟೀಲ, ಪ್ರೊ. ಛಾಯಾ ಭರತನೂರ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಬಸವರಾಜ ದೇಶಮುಖ ಸ್ವಾಗತಿಸಿದರು. ಡಾ.ನೀಲಾಂಬಿಕಾ ಶೇರಿಕಾರ ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರೊ. ಶರಣಮ್ಮ ವಾರದ ವಂದಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago