ಜನರಿಗೆ ಕೊಟ್ಟ ಗ್ಯಾರಂಟಿಗಳು ನಮ್ಮ ಸರ್ಕಾರ ಈಡೇರಿಸಿದೆ: ಶಾಸಕ ಕನೀಜ್ ಫಾತೀಮಾ

0
41

ಕಲಬುರಗಿ: ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತು. ಅಂದು ಮಾಡಿದ ಘೋಷಣೆಯನ್ನು ನಮ್ಮ ಸರ್ಕಾರ ಇಂದು ಜಾರಿಗೆ ತಂದು ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ ಎಂದು ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಹೇಳಿದರು.

ನಗರದ ಕಲಕತಾ ಫಂಕ್ಷನ್ ಹಾಲನಲ್ಲಿ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಕಾರ್ಯಕ್ರಮವನ್ನು ಕ್ಷೇತ್ರದಲ್ಲಿ ಚಾಲನೆ ನೀಡಿ ಮಾತನಾಡುತ್ತಿದ್ದರು.

Contact Your\'s Advertisement; 9902492681

ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಸದೃಢತೆ ಒದಗಿಸುವ ಹಿನ್ನೆಲೆಯಲ್ಲಿ ಈ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ರೂಪಿಸಿದೆ. ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರು ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಮನೆಗಳಿಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ.

ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಐದು ಕೆಜಿ ಅಕ್ಕಿಯನ್ನು ಉಚಿತವಾಗಿ ಅಥವಾ ಅಕ್ಕಿ ಖರೀದಿಗೆ ಹಣ ಪಡೆದುಕೊಳ್ಳುತ್ತಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಯಜಮಾನಿ ತಿಂಗಳಿಗೆ ರೂ 2000 ಪಡೆಯಲಿದ್ದಾರೆ. ಜಿಲ್ಲೆಯಲ್ಲಿ 4.72 ಲಕ್ಷ ಹಾಗೂ ರಾಜ್ಯದಲ್ಲಿ 1.28 ಕೋಟಿ ನೋಂದಾಯಿತ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಂತ್ರಿಕ ಕಾರಣಗಳಿಂದ ಖಾತೆಗಳಿಗೆ ಹಣ ಜಮಾ ಆಗದೆ ಇದ್ದವರು ಚಿಂತೆ ಮಾಡಬೇಡಿ ಎಲ್ಲರ ಖಾತೆಗಳಿಗೆ ಹಣ ನೇರವಾಗಿ ಪಾವತಿ ಆಗುತ್ತಿದೆ ಎಂದು ಜನರಿಗೆ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಗಳನ್ನು ಮನಗಂಡು ಲೋಕ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದರನ್ನು ಆರಿಸುವ ಗ್ಯಾರಂಟಿ ನಮ್ಮ ಮೇಲಿದೆ ಎಂದು ಲೋಕಸಭಾ ಚುನಾವಣೆಯ ವಿಜಿಲ್ ಹಾಕಿ ಜನರಿಗೆ ಕರೆ ನೀಡಿದರು.

ಈ ವೇಳೆ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅಜಮಲ್ ಗೋಲಾ, ವಾಹೆದ್ ಅಲಿ ಫಾತೇಖಾನಿ, ಮಾಜಿ ಮಹಾಪೌರರಾದ ಸೈಯದ್ ಅಹ್ಮದ್, ಪಾಲಿಕೆ ಖುಸ್ರೊ ಜಾಗರಿದಾರ್, ಫರಾಜ್ ಉಲ್ ಇಸ್ಲಾಂ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here