ಮಹಿಳೆಯರ ಸ್ವಾವಲಂಬನೆಗಾಗಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ

0
44

ಶಹಾಬಾದ: ತಾಲೂಕಿನ ಹೊನಗುಂಟಾ ಗ್ರಾಮದ ಅಂಬಿಗರ ಚೌಡಯ್ಯ ಭವನದಲ್ಲಿ ಗ್ರಾಪಂ ಕಾರ್ಯಾಲಯ ಹಾಗೂ ಕಂದಾಯ ಇಲಾಖೆಯ ವತಿಯಿಂದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿನಾಥ ರಾವೂರ ಮಾತನಾಡಿ, ಸರಕಾರ ಮಹಿಳೆಯರ ಸ್ವಾವಲಂಬನೆಗಾಗಿ ದಿಟ್ಟ ಹೆಜ್ಜೆಯನ್ನಿಟ್ಟು ಗೃಹಲಕ್ಷ್ಮಿ ಯೋಜನೆಯನ್ನು ಅನುμÁ್ಠನ ಮಾಡಿದೆ. ಮಹಿಳೆಯರು ಆರ್ಥಿಕವಾಗಿ ಸಬಲಗೊಂಡರೆ ಇಡೀ ಕುಟುಂಬ ಹಾಗೂ ಆ ಮೂಲಕ ದೇಶವೇ ಸಬಲಗೊಂಡಂತಾಗುತ್ತದೆ. ಕುಟುಂಬದ ದೈನಂದಿನ ಖರ್ಚು ವೆಚ್ಚಗಳು ಹಾಗೂ ಅನಿರೀಕ್ಷಿತ ಸಂದರ್ಭಗಳಲ್ಲಿ ಬರುವಂತಹ ಖರ್ಚುವೆಚ್ಚಗಳನ್ನು ನಿಭಾಯಿಸುವುದು ಮಹಿಳೆಯರಿಗೆ ಪ್ರತಿದಿನದ ಸವಾಲಾಗಿರುತ್ತದೆ.

Contact Your\'s Advertisement; 9902492681

ಕುಟುಂಬದ ಕಷ್ಟದ ಕಾಲದಲ್ಲಿ ಕುಟುಂಬದ ಯಜಮಾನಿಯೇ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುತ್ತಾಳೆ ಹಾಗೂ ಎಂತಹ ಸಂಕಷ್ಟ ಪರಿಸ್ಥಿತಿಯಲ್ಲಿಯೂ ಪುರುಷನಿಗೆ ಬೆಂಬಲ ನೀಡಿ ಆಧಾರ ಸ್ತಂಭವಾಗಿ ನಿಲ್ಲುತ್ತಾಳೆ. ಇಂತಹ ಯಜಮಾನಿಗೆ ಗೌರವವನ್ನು ಸೂಚಿಸಿ ಆಕೆಯನ್ನು ಅರ್ಥಿಕವಾಗಿ ಸಬಲಳನ್ನಾಗಿ ಮಾಡಲು ಕರ್ನಾಟಕ ಸರ್ಕಾರವು ಪ್ರತಿ ತಿಂಗಳು ಎರಡು ಸಾವಿರ ರೂಪಾಯಿಗಳನ್ನು ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. ಮುಖಾಂತರ ಜಮೆ ಮಾಡುವ ದೇಶದಲ್ಲಿಯೇ ಅತ್ಯಂತ ವಿನೂತನವಾದ ಹಾಗೂ ವಿಶಿಷ್ಟವಾದ ಯೋಜನೆಯನ್ನು ಜಾರಿಗೆ ತಂದಿರುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಮಲ್ಕಪ್ಪ ಮುದ್ದಾ ಮಾತನಾಡಿ, ಸಮಾಜದ ಎಲ್ಲಾ ಸ್ಥರದ ಜನರಿಗೆ ಅನುಕೂಲವಾಗಲೆಂದು ಹಾಗೂ ಸಾಮಾಜಿಕ ನ್ಯಾಯವನ್ನು ಒದಗಿಸಲೆಂದು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಈಗಾಗಲೇ ಮೂರು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಮುಖಂಡ ಪೂಜಪ್ಪ ಮೇತ್ರೆ ಮಾತನಾಡಿ, ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ನಮ್ಮದು ನುಡಿದಂತೆ ನಡೆದ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ನೇತೃತ್ವದಲ್ಲಿನ ಸರ್ಕಾರ.ರಾಜ್ಯದಲ್ಲಿ ಸುರ್ವರ್ಣಾಕ್ಷರದಲ್ಲಿ ಬರೆದಿಡುವ ದಿನ ಇದಾಗಿದೆ.ಎಲ್ಲರಿಗೂ ಸಮಪಾಲು ಸಮಬಾಳು ಎಂಬ ಧ್ಯೇಯೋದ್ದೇಶದಿಂದ ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಶಕ್ತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಗ್ರಾಪಂ ಅಧ್ಯಕ್ಷ ಮೆಹಬೂಬ ಪಟೇಲ್,ಕಂದಾಯ ಅಧಿಕಾರಿ ಹಣಮಂತರಾವ ಪಾಟೀಲ,ರುದ್ರಗೌಡ ಮಾಲಿಪಾಟೀಲ,ದೇವೆಂದ್ರ ಕಾರೊಳ್ಳಿ, ರಾಜು ಆಡಿನ್,ಸಂಗಣ್ಣ ಇಜೇರಿ, ರಾಯಪ್ಪ ಮಿಣಜಗಿ,ರಾಜು ಮರಗೋಳ, ಇಸ್ಮಾಯಿಲ್ óಷಾ, ಪಿಡಿಓ ಮಹಾದೇವ ಧ್ಯಾಮ,ಮಲ್ಲೇಶಿ ಭಜಂತ್ರಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here