ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಹಲ್ಲೆ: ಸಿಬ್ಬಂದಿಗಳಿಂದ ಪ್ರತಿಭಟನೆ

0
75

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಆರೋಗ್ಯ ನಿರೀಕ್ಷಕರ ಮೇಲೆ ಇಬ್ಬರು ಹಲ್ಲೆ ಮಾಡಿರುವ ಘಟನೆ ಬುಧವಾರ ಸಂಜೆ ವೇಳೆ ನಡೆದ್ದು ಘಟನೆ ಖಂಡಿಸಿ ಪಾಲಿಕೆ ಸಿಬ್ಬಂದಿಗಳು ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಹಲ್ಲೆ ನಡೆಸಿರುವ ಆರೋಪಗಳ ಮೇಲೆ ಕಠಿಣ ಕ್ರಮಕೈಗೊಂಡು ಸಿಬ್ಬಂದಿಗಳಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.

ಪಾಲಿಕೆಯ ಆರೋಗ್ಯ ನಿರೀಕ್ಷಕರಾದ ಧನಶೆಟ್ಟಿ ಅವರ ಮೇಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಟ್ರೆಡ್ ಪರವಾನಗಿಯ ನೀಡುವಲ್ಲಿ ವಿಳಂಬ ಮಾಡಿರುವ ಹಿನ್ನೆಲೆಯಲ್ಲಿ ಆರೋಪಗಳು ಹಲ್ಲೆ ಮಾಡಿರುವುದಾಗಿ ಕೇಳುಬರುತ್ತಿದ್ದು, ಆರೋಪಿಗಳು ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೇರಿಯಾಗಿದ್ದು ಹಲ್ಲೆ ಮಾಡಿ ಕುಟುಂಬಕ್ಕೂ ಬೆದರಿಕೆ ಹಾಕಿದ್ದರೆ ಎಂದು ಪ್ರತಿಭಟನೆ ನಿರತ ಸಿಬ್ಬಂದಿಗಳು ಆರೋಪಿಸಿದ್ದಾರೆ.

Contact Your\'s Advertisement; 9902492681

ಪಾಲಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಆಗಾ್ಗ್ ವೈಯಕ್ತಿಕ ಹಲ್ಲೆದಂತಹ ಘಟನೆಗಳು ನಡೆಯುತ್ತಿವೆ. ಹಲ್ಲೆ ನಡೆಸುವ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮ ಕೈಗೊಂಡು ಪಾಲಿಕೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕೆಂದು ಮಹಾನಗರ ಪಾಲಿಕೆಯ ಅಧಿಕಾರಿ ಹಾಗೂ ನೌಕರರ ಸಂಘದಿಂದ ಪಾಲಿಕೆಯ ಆಯುಕ್ತರಿಗೆ ಪ್ರತಿಭಟನೆ ನಡೆಸುವ ಮೂಲಕ ಮನವಿ ಪತ್ರ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here