ಬಿಸಿ ಬಿಸಿ ಸುದ್ದಿ

ಗ್ರಾ.ಪಂ. ಗ್ರಂಥಾಲಯಗಳಲ್ಲಿ ʼಓದುವ ಬೆಳಕುʼ ಅಂಗವಾಗಿ ʼನಾನು ಓದುವ ಪುಸ್ತಕ ʼ ಅಭಿಯಾನ: ಸಚಿವ ಖರ್ಗೆ

ಬೆಂಗಳೂರು: ಮಕ್ಕಳನ್ನು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಾದ್ಯಂತ ‘ಓದುವ ಬೆಳಕು’ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳನ್ನು ವಿಶೇಷವಾಗಿ ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ‌ ನೀಡಿರುವ ಅವರು
ಗ್ರಂಥಾಲಯಗಳನ್ನು ಗ್ರಾಮೀಣ ಅರಿವು ಕೇಂದ್ರಗಳನ್ನಾಗಿಸಲು ಗ್ರಂಥಾಲಯಗಳ ನವೀಕರಣ, ಡಿಜಿಟಲೀಕರಣ ಸೇರಿದಂತೆ ವಿವಿಧ ಕ್ರಮಗಳನ್ನು ಈಗಾಗಲೆ ಕೈಗೊಳ್ಳಲಾಗಿದೆ. ಪ್ರಸ್ತುತ ʼಓದುವ ಬೆಳಕುʼ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಉಪಯುಕ್ತ ಚಟುವಟಿಕೆಯನ್ನು ಆಯೋಜಿಸುವ ಮೂಲಕ ಗ್ರಂಥಾಲಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಗ್ರಂಥಾಲಯಕ್ಕೆ ಭೇಟಿ ನೀಡುವ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಉತ್ತೇಜಿಸಲು 2023ರ ಸೆಪ್ಟೆಂಬರ್ ತಿಂಗಳಲ್ಲಿ ʼನಾನು ಓದುವ ಪುಸ್ತಕʼ ಅಭಿಯಾನವನ್ನು ಆಯೋಜಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳ ಹೆಸರನ್ನು ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರದರ್ಶಿಸಲಾಗುವುದು. ಗ್ರಂಥಾಲಯಕ್ಕೆ ಭೇಟಿ ನೀಡುವ ಮಕ್ಕಳು ಪುಸ್ತಕವನ್ನು ಓದಲು ಗ್ರಂಥಾಲಯ ಮೇಲ್ವಿಚಾರಕರು ಪ್ರೋತ್ಸಾಹಿಸುತ್ತಾರೆ. ಮಕ್ಕಳು ಪುಸ್ತಕವನ್ನು ಓದಿ ಮುಗಿಸಿದ ನಂತರ ತಾವು ಓದಿದ ಪುಸ್ತಕಗಳ ಬಗ್ಗೆ ಸೂಚನೆಗಳಂತೆ ಮಾಹಿತಿ ಒದಗಿಸಬೇಕು. ಮಕ್ಕಳು ಓದಿದ ಪುಸ್ತಕಗಳ ಸಂಖ್ಯೆಯನ್ನು ಗ್ರಂಥಾಲಯದಲ್ಲಿ ಪ್ರದರ್ಶಿಸಲಾಗುವುದು. ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚು ಪುಸ್ತಕಗಳನ್ನು ಓದಿದ ಮಕ್ಕಳ ಹೆಸರುಗಳನ್ನು ತಿಂಗಳ ಕೊನೆಯ ದಿನದಂದು ಘೋಷಿಸಲಾಗುವುದು ಎಂದು ಹೇಳಿದ ಪ್ರಿಯಾಂಕ್‌ ಖರ್ಗೆ, ಗ್ರಾಮೀಣ ಮಕ್ಕಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

emedialine

Recent Posts

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

33 mins ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

2 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

2 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

5 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

5 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

5 hours ago