ಮಾಜಿ ಸಚಿವ ಪಿ.ಚಿದಂಬರಂ ಬಂಧನ ಖಂಡಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

0
21

ಕಲಬುರಗಿ: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಬಂಧನ ಖಂಡಿಸಿ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಅವರು ತಮ್ಮ ಅಧಿಕಾರ ದುರ್ಬಳಕ್ಕೆ ಮಾಡಿಕೊಳುತ್ತಿದ್ದಾರೆಂದು ಕಾರ್ಯಕರ್ತರು ಆರೋಪಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಈರಣ್ಣಾ ಪಾಟೀಲ ಝಳಕಿ ಮಾತನಾಡಿ ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಬಂಧನದ ಮೂಲಕ ಬಿಜೆಪಿ ದೇಶದಲ್ಲಿ ಸೇಡು ಮತ್ತು ಅರಾಜಕತೆಯ ರಾಜಕಾರಣ ನಡೆಸುತಿದೆ ಎಂದು ದುರಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here