ಸುರಪುರ:ನಗರದ ಜೆಸ್ಕಾಂ ಇಲಾಖೆಯ ಎಇಇ ಅಶೋಕ ಚವ್ಹಾಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಮುಖಂಡರು ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ,ನಗರದ ಜೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿರುವ ಅಶೋಕ ಚವ್ಹಾಣ ಅವರು ತಮ್ಮ ಸ್ವಜಾತಿ ವ್ಯಾಮೋಹದಿಂದ ದೇವಾಪುರ ಜೆಸ್ಕಾಂ ಕಚೇರಿಯಲ್ಲಿ ಪವರ್ ಮ್ಯಾನ್ ಆಗಿರುವ ಉಮೇಶ ರಾಠೋಡ ಎನ್ನುವವರಿಗೆ ಶಾಖಾಧಿಕಾರಿಯಾಗಿ ನೇಮಕಗೊಳಿಸಿಕೊಂಡು ಆದೇಶ ಹೊರಡಿಸಿರುವುದನ್ನು ಕೂಡಲೇ ರದ್ದುಗೊಳಿಸಬೇಕು.ಈ ಹಿಂದೆ ಇದೇ ಕಚೇರಿಯಲ್ಲಿ ಜೆ.ಇ ಆಗಿದ್ದ ಪ್ರಮೋದ ಅವರನ್ನು ನೇಮಕಗೊಳಿಸಬೇಕು ಮತ್ತು ಎಇಇ ಅಶೋಕ ಚವ್ಹಾಣ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು,ಇಲ್ಲವಾದಲ್ಲಿ ಇದೇ ತಿಂಗಳು 6ನೇ ತಾರಿಖು ಸುರಪುರ ನಗರದ ಜೆಸ್ಕಾಂ ಎಇಇ ಕಚೇರಿಗೆ ಮುಳ್ಳು ಬೇಲಿ ಹಚ್ಚಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ಗ್ರೇಡ-2 ತಹಸೀಲ್ದಾರ್ ಮಲ್ಲಯ್ಯ ದಂಡು ಅವರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಸಂಚಾಲಕ ಬಸವರಾಜ ದೊಡ್ಮನಿ,ಮುಖಂಡರಾದ ಮೂರ್ತಿ ಬೊಮ್ಮನಹಳ್ಳಿ,ಮಹೇಶ ಯಾದಗಿರಿ,ಜೆಟ್ಟೆಪ್ಪ ನಾಗರಾಳ,ಮಾನಪ್ಪ ಬಿಜಾಸಪುರ,ಖಾಜಾಹುಸೇನ ಗುಡಗುಂಟಿ,ರಾಮಣ್ಣ ಶೆಳ್ಳಗಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…