ಬಿಸಿ ಬಿಸಿ ಸುದ್ದಿ

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅನನ್ಯ

ಕಲಬುರಗಿ: ಶಿಕ್ಷಕರು ವಿದ್ಯಾರ್ಥಿಗಳಿಗೆ ಶ್ರೇಷ್ಠ ಜ್ಞಾನ, ಬುದ್ದಿ, ಸಂಸ್ಕಾರ, ಮಾನವೀಯ ಮೌಲ್ಯಗಳು ಮತ್ತು ಸೂಕ್ತ ಮಾರ್ಗದರ್ಶನ ಮಾಡಿ, ಅವರನ್ನು ರಾಷ್ಟ್ರದ ಶ್ರೇಷ್ಠ ಸಂಪನ್ಮೂಲಗಳನ್ನಾಗಿಸುತ್ತಾರೆ. ಸಮಾಜದಲ್ಲಿ ಗುರುವಿನ ಪಾತ್ರ ನಿರ್ವಹಿಸುತ್ತಾರೆ. ಸದೃಢ ರಾಷ್ಟ್ರದ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅನನ್ಯವಾಗಿದೆ ಎಂದು ಜೇವರ್ಗಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಿಬಿಸಿ ಉಪಾಧ್ಯಕ್ಷ ರವೀಂದ್ರಕುಮಾರ ವೈ.ಕೋಳಕೂರ ಹೇಳಿದರು.

ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಮಂಗಳವಾರ ವಿದ್ಯಾರ್ಥಿಗಳು ಏರ್ಪಡಿಸಿದ್ದ ‘ಶಿಕ್ಷಕರ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರನ್ನು ಸತ್ಕರಿಸಿ ಮಾತನಾಡುತ್ತಿದ್ದರು.

ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ಅಲ್ಲಾಉದ್ದೀನ್ ಸಾಗರ ಮಾತನಾಡಿ, ದೇಶಕ್ಕೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕೊಡುಗೆ ಅಪಾರವಾಗಿದೆ. ನಮ್ಮ ಪ್ರದೇಶ ಹಿಂದುಳಿದಿಲ್ಲ. ಅನೇಕ ಪ್ರತಿಭೆಗಳು ಉನ್ನತವಾದ ಸಾಧನೆಯನ್ನು ಮಾಡುತ್ತಿದ್ದಾರೆಂದರೆ, ಅದಕ್ಕೆ ಈ ಭಾಗದ ಶಿಕ್ಷಕರ ಪರಿಶ್ರಮವೇ ಕಾರಣವಾಗಿದೆ. ಶಿಕ್ಷಕರು ಪಠ್ಯದ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಮಾನವೀಯ ಮೌಲ್ಯಗಳ ಗುಣಗಳನ್ನು ಬಿತ್ತುವ ಬೆಳೆಸುವ ಕಾರ್ಯ ಮಾಡಬೇಕು. ಮೌಢ್ಯತೆಯಿಂದ ಹೊರಬಂದು ವೈಚಾರಿಕತೆ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖಂಡ ಪ್ರೇಮಾನಂದ ಸಾಹು ಶೆಟಗಾರ, ಕಾಲೇಜಿನ ಉಪನ್ಯಾಸಕರಾದ ನಯಿಮಾ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಎಚ್.ಬಿ.ಪಾಟೀಲ, ರೇಣುಕಾ ಚಿಕ್ಕಮೇಟಿ, ಮಲ್ಲಪ್ಪ ರಂಜಣಗಿ, ಮಲ್ಲಿಕಾರ್ಜುನ ದೊಡ್ಡಮನಿ, ರಂಜಿತಾ ಠಾಕೂರ, ಶಮೀನಾ ಬೇಗಂ, ಸಿದ್ಮಮ್ಮ, ನಾಗಮ್ಮ, ಸಾಹೇಬಗೌಡ ಪಾಟೀಲ, ನುಝಹತ್ ಪರ್ವಿನ್, ಪ್ರ.ದ.ಸ ನೇಸರ ಎಂ. ಬೀಳಗಿಮಠ, ದ್ವಿದ.ಸ ರಾಮಚಂದ್ರ ಚವ್ಹಾಣ, ಸೇವಕ ಭಾಗಣ್ಣ ಹರನೂರ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago