ಶಹಪುರ; ನಗರದ ಪ್ರಾರ್ಥನ ಶಿಕ್ಷಣ ಸಂಸ್ಥೆಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನ ಮತ್ತು ಶಿಕ್ಷಕರ ದಿನಾಚರಣೆ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶಿವಪ್ಪ ಮಾತನೂರ,ದೇವೇಂದ್ರಪ್ಪಾ ಬಡಿಗೇರ ಮತ್ತು ಉಪನ್ಯಾಸಕರಾದ ಅಂಬೇಡ್ಕರ್ ನಾಟಿಕಾರ್, ಡಿ.ಪಿ.ಸಜ್ಜನ, ಶಿವಪ್ರಕಾಶ ಬಡಿಗೇರ,ಸದಾನಂದ ಪೀರಗೋಳ,ಹಣಮಂತ ಜಮಾದಾರ,ಶ್ರೀಶೈಲ ಡಂಬಳ,ಪರಶುರಾಮ ಮಯೂರ, ಬಸಮ್ಮ,ಅರ್ಪಿತಾ ಗಂಗಧಮಠ,ವಿಶ್ವಜೋತ್ಯಿ ಕೆಂಪು, ಮಧು,ಅನಿತಾ ಚೌದರಿ,ಸಮೀರಾ ಹಾಗೂ ಕಾಲೇಜಿನ ಮುದ್ದು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಸರ್ವಪಲ್ಲಿ ರಾಧಾಕೃಷ್ಣನ್ ರವರ ಜೀವನದ ಮತ್ತು ಶಿಕ್ಷಕರ ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.ನಿರೂಪಣೆ ಗುರುಲಿಂಗಪ್ಪ,ಪ್ರಾರ್ಥನ ಗೀತೆ ರಕ್ಷಿತಾ,ಸ್ವಾಗತ ನೀವೆದಿತಾ,ವಂದನಾರ್ಪಣೆ ವಿನೋದ ವಹಿಸಿದರು ಎಂದು ಪತ್ರಿಕಾ ಪ್ರಕಟಣೆಗೆ ಉಪನ್ಯಾಸಕರಾದ ಡಿ.ಪಿ.ಸಜ್ಜನ ತಿಳಿಸಿದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…