ಬೆಂಗಳೂರು; ವಿದ್ಯೆ ಕಲಿಸುವುದು ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ 43 ಮಂದಿ ಪುರಸ್ಕøತ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು. ಇವರು ಸಮಾಜದ, ದೇಶದ ಭವಿಷ್ಯ ರೂಪಿಸುವ ಕಾಯಕ ಜೀವಿಗಳು. ಡಿಗ್ರಿ ಪಡೆದು, ಡಾಕ್ಟರೇಟ್ ಪಡೆದರೂ ಅವರಲ್ಲಿ ವೈಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಯದಿದ್ದರೆ, ತಲೆಯೊಳಗೆ ಮೌಢ್ಯ ತುಂಬಿಕೊಂಡಿದ್ದರೆ ಅವರನ್ನು ಸುಶಿಕ್ಷಿತರು ಎಂದು ಕರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಈ ಹಿಂದೆ ಶೂದ್ರರು ಮತ್ತು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ಹೊರಗೆ ಇಡಲಾಗಿತ್ತು. ನಮ್ಮ ಸಂವಿಧಾನ ಎಲ್ಲರಿಗೂ ಶಿಕ್ಷಣದ ಅವಕಾಶವನ್ನು ಒದಗಿಸಿತು. ಈಗ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಆದ್ದರಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ಹೊಣೆ ನಮ್ಮೆಲ್ಲರ ಮೇಲಿದೆ. ಸ್ವಾತಂತ್ರ್ಯ ಬಂದು 76 ವರ್ಷವಾದರೂ ಶೇಕಡ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಶಿಕ್ಷಣದಿಂದ ವಂಚಿತರಾದವರು ಅಸಮಾನತೆಗೆ ಬಲಿಯಾಗುತ್ತಾರೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗಬೇಕಾದರೆ ಎಲ್ಲರಿಗೂ ವೈಜ್ಞಾನಿಕ, ವೈಚಾರಿಕ ಶಿಕ್ಷಣ ದೊರೆತು ದೇಶ ಪ್ರಗತಿ ಪಥದಲ್ಲಿ ಮುನ್ನಡೆಯಬೇಕು ಎಂದರು.
ಶಿಕ್ಷಕ ವೃತ್ತಿಗೆ ಬರುವಾಗ ಎಲ್ಲಾ ಶಿಕ್ಷಕರಿಗೂ ಒಂದೇ ರೀತಿಯ ತರಬೇತಿ ಇರುತ್ತದೆ. ಆದರೆ ಬೇರೆ ಬೇರೆ ಜಿಲ್ಲೆಗಳ ಫಲಿತಾಂಶದ ಪ್ರಮಾಣ, ಶೈಕ್ಷಣಿಕ ಗುಣಮಟ್ಟ ಭಿನ್ನವಾಗಿರುವುದು ಏಕೆ ಎನ್ನುವುದನ್ನು ಪ್ರತಿಯೊಬ್ಬ ಶಿಕ್ಷಕರೂ ತಮ್ಮನ್ನು ತಾವು ಕೇಳಿಕಂಡು ದಿನದಿಂದ ದಿನಕ್ಕೆ ಉನ್ನತೀಕರಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ನಮ್ಮ ಸರ್ಕಾರ ಬಂದ ಬಳಿಕ 10 ಸಾವಿರ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸಿದ್ದೂ ಸೇರಿ ಹಲವು ಕಾರ್ಯಕ್ರಮ ಮಾಡಿದೆವು. ಪರಿಶಿಷ್ಟ ಜಾತಿ, ವರ್ಗದ ಮಕ್ಕಳಿಗೆ ನಾವು ನಮ್ಮ ಸರ್ಕಾರದ ಅವಧಿಯಲ್ಲಿ ಲ್ಯಾಪ್ ಟಾಪ್ ನೀಡುವ ಕಾರ್ಯಕ್ರಮ ಆರಂಭಿಸಿದೆವು. ನಂತರ ಬಂದ ಸರ್ಕಾರ ಇದನ್ನು ಸ್ಥಗಿತಗೊಳಿಸಿತ್ತು. ಈಗ ಮತ್ತೆ ನಾವು ಅಧಿಕಾರಕ್ಕೆ ಬಂದು ಲ್ಯಾಪ್ಟಾಪ್ ಕೊಡುವುದನ್ನು ಮುಂದುವರೆಸಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಸಚಿವರು, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…