ವಾಡಿ; ಲಾಡ್ಲಪುರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರು ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ ವರ್ತಿಸಿರುವ ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಲು ಹಾಗೂ ಆರೋಪಿಗೆ ನಿದರ್ಶನಿಯ ಶಿಕ್ಷೆ ನೀಡಲು ಆಗ್ರಹಿಸಿ ಂIಆSಔ ವಾಡಿ ಸ್ಥಳೀಯ ಸಮಿತಿಯ ವತಿಯಿಂದ ಮಾನ್ಯ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಅವರ ಮುಖಾಂತರ ಮಾನ್ಯ ಶಾಸಕರಿಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಬುರಗಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಮನವಿ ಪತ್ರದಲ್ಲಿ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಭಾರಿ ಮುಖ್ಯ ಶಿಕ್ಷಕ ಪ್ರಭುಕಾಂತ ಧನ್ನಾ ಅವರು ವಿದ್ಯಾರ್ಥಿನಿಯರಿಗೆ ನಾನು ಹೇಳಿದಂತೆ ಕೇಳದಿದ್ದರೆ ನಿಮ್ಮ ಆಂತರಿಕ ಅಂಕ ಕಡಿತ ಮಾಡುತ್ತೇನೆ ಎಂದು ಬೆದರಿಸುವುದು, ವಿದ್ಯಾರ್ಥಿನಿಯರ ಅಂಗಾಂಗಗಳನ್ನು ಸ್ಪರ್ಶಿಸುವುದು, ಅವರ ಜೊತೆ ಅನುಚಿತವಾಗಿ ವರ್ತಿಸಿರುವುದು ಅತ್ಯಂತ ಆಘಾತಕಾರಿಯಾಗಿದೆ.
ಜ್ಞಾನ ನೀಡುವಂತಹ ಶಿಕ್ಷಕರೇ ಇಂತಹ ಕೀಳು ಘಟನೆಗಳಲ್ಲಿ ಭಾಗಿಯಾಗುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಈಗಾಗಲೇ ಬಹಳಷ್ಟು ಸರಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಕುಸಿಯುತ್ತಿದೆ. ಇಂತಹ ಘಟನೆಗಳಿಂದಾಗಿ ತಂದೆ-ತಾಯಿಗಳು, ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಹಿಂಜರಿಯುವಂತಾಗುತ್ತಿದೆ. ವಿದ್ಯಾರ್ಥಿನಿಯರು ಶಾಲೆಗೆ ತೆರಳಲು ಭಯಪಡುತ್ತಿದ್ದಾರೆ.
ಈಗಾಗಲೇ ಆರೋಪಿಯಾಗಿರುವ ಪ್ರಭಾರಿ ಮುಖ್ಯ ಶಿಕ್ಷಕರನ್ನು ಪೊಲೀಸ್ ಇಲಾಖೆಯು ಪೋಕ್ಸೋ ಕಾಯ್ದೆಯಡಿ ಬಂಧಿಸಿದೆ. ಆದರೆ ಈ ಘಟನೆಯ ಕುರಿತು ನಿಷ್ಪಕ್ಷಪಾತವಾದ ತನಿಖೆಯನ್ನು ನಡೆಸಿ ಆರೋಪಿಗೆ ನಿದರ್ಶನಿಯವಾದ ಶಿಕ್ಷೆಯನ್ನು ನೀಡಬೇಕು ಹಾಗೂ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಂIಆSಔ ವಿದ್ಯಾರ್ಥಿ ಸಂಘಟನೆಯು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತದೆ.