ಪುಸ್ತಕಗಳು ಶ್ರೇಷ್ಠ ವ್ಯಕ್ತಿತ್ವ ನಿರ್ಮಿಸುವ ಸಾಧನಗಳು

0
65

ಕಲಬುರಗಿ: ಒಬ್ಬ ವ್ಯಕ್ತಿಯ ಜೀವನದ ದಿಕ್ಕನ್ನೇ ಬದಲಿಸುವ ಶಕ್ತಿ ಪುಸ್ತಕಗಳಿಗಿವೆ. ಇವುಗಳು ಸಾಧನೆಯ ದಾರಿಯನ್ನು ತಿಳಿಸುವ ಮೂಲಕ ಶ್ರೇಷ್ಠ ವ್ಯಕ್ತಿತ್ವ ನಿರ್ಮಾಣ ಮಾಡುವ ಸಾಧನಗಳಾಗಿವೆ. ಆದ್ದರಿಂದ ಅನೇಕ ಚಟಗಳನ್ನು ರೂಢಿಸಿಕೊಂಡು ಹಾಳಾಗುವ ಬದಲು, ಉತ್ತಮವಾದ ಪುಸ್ತಕಗಳನ್ನು ನಿರಂತರವಾಗಿ ಓದುವ ಹವ್ಯಾಸವನ್ನು ಅಳವಡಿಸಿಕೊಂಡರೆ ಬದುಕು ಸುಂದರವಾಗುತ್ತದೆ ಎಂದು ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು.

ನಗರದ ಜಗತ್ ಬಡಾವಣೆಯಲ್ಲಿರುವ ‘ಶ್ರೀ ಮೈಲಾರಲಿಂಗೇಶ್ವರ ಪ್ರಾಥಮಿಕ ಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ ಮತ್ತು ‘ಜಿಲ್ಲಾ ಯುವ ಸಂಘಗಳ ಒಕ್ಕೂಟ’ದ ವತಿಯಿಂದ ಬುಧವಾರ ಜರುಗಿದ ‘ರಾಷ್ಟ್ರೀಯ ಪುಸ್ತಕ ಓದು ದಿನಾಚರಣೆ’ಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಹನೀಯರ ಪುಸ್ತಕಗಳನ್ನು ಉಚಿತವಾಗಿ ವತರಣೆ ಮಾಡಿ ಮಾತನಾಡಿದರು.

Contact Your\'s Advertisement; 9902492681

ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ಜ್ಞಾನಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಇದು ಯಾರಿಂದಲೂ ಕಳ್ಳತನ ಮಾಡಲಾಗದ ಸಂಪತ್ತಾಗಿದೆ. ಇಂತಹ ಅಮೂಲ್ಯವಾದ ಸಂಪತ್ತನ್ನು ಪ್ರತಿಯೊಬ್ಬರು ಪಡೆಯಬೇಕಾದರೆ ಸದಾ ಪುಸ್ತಕಗಳನ್ನು ಓದಬೇಕು. ವಿದ್ಯಾರ್ಥಿ ದೆಸೆಯಿಂದಲೇ ಶ್ರೇಷ್ಠ ಪುಸ್ತಕಗಳನ್ನು ಓದುವ ಹವ್ಯಾಸ ಮೈಗೂಡಿಸಿಕೊಳ್ಳಬೇಕು. ನಾವು ಹೆಚ್ಚು ಓದಿದಷ್ಟು ಅರಿವು ಮತ್ತು ಜ್ಞಾನದ ವ್ಯಾಪ್ತಿ ಹೆಚ್ಚಾಗಿ ವ್ಯಕ್ತಿ, ಶಕ್ತಿಯಾಗುತ್ತಾನೆ. ವಿಶೇಷವಾಗಿ ಯುವಕರು ಉತ್ತಮ ಗ್ರಂಥಗಳ ಅಧ್ಯಯನದತ್ತ ಚಿತ್ತಹರಿಸಬೇಕಾಗಿದೆ ಎಂದು ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಕಜಾಪ ಜಿಲ್ಲಾಧ್ಯಕ್ಷ, ಸಾಹಿತಿ ಎಂ.ಬಿ.ನಿಂಗಪ್ಪ, ನ್ಯಾಯವಾದಿ ಅನುರಾಧಾ ಕಟ್ಟಿಮನಿ, ಶಾಲೆಯ ಮುಖ್ಯ ಶಿಕ್ಷಕ ಎಸ್.ಎಸ್.ಹೂಗಾರ, ಶಿಕ್ಷಕರಾದ ಚಂದ್ರಕಲಾ ಮಾಸಿಮಠ, ಬಸಮ್ಮ ಬಿ.ಸಾತಿಹಾಳ್, ಶಂಭುಲಿಂಗ ದೊಡ್ಡಮನಿ, ಸಹಾಯಕಿ ವಿಜಯಲಕ್ಷ್ಮೀ ಗಾಂಗಜಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here