ಕಲಬುರಗಿ: ಮನೆಗೆ ಸೀಮಿತವಾಗಿದ್ದ ಅಷ್ಟಮಿಯನ್ನು ಸಾರ್ವತ್ರಿಕವಾಗಿ ಆಚರಿಸುವ ಮೂಲಕ ಸಹಬಾಳ್ವೆಗೆ ಅವಕಾಶ ಮಾಡಿಕೊಟ್ಟಿದೆ ಎಂದು ಸಂಪನ್ಮೂಲ ವ್ಯಕ್ತಿ ದೇವಿಂದ್ರಪ್ಪ ವಿಶ್ವಕರ್ಮ ಹೇಳಿದರು.
ಅವರು ಜೇವರ್ಗಿ ನಗರದ ಮಹಾಲಕ್ಷ್ಮೀ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಬಾಲ್ಯದಲ್ಲಿ ಮಕ್ಕಳಿಗೆ ಓದು ಬರಹ ಕಲಿಸುವುದರ ಜೊತೆಗೆ ಸಂಸ್ಕಾರದ ಶಿಕ್ಷಣವನ್ನು ನೀಡುವುದು ಅತ್ಯಗತ್ಯ. ಮಹಾಭಾರತದ ಯುದ್ದದಲ್ಲಿ ಅರ್ಜುನನ ಸಾರಥ್ಯ ವಹಿಸಿದ ಶ್ರೀಕೃಷ್ಣನು ಅಧರ್ಮವನ್ನು ತೊಲಗಿಸಿ ಧರ್ಮ ರಕ್ಷಣೆಗಾಗಿ ಹೋರಾಡಲು ಅರ್ಜುನನಿಗೆ ಉಪದೇಶಿಸುವ ಮೂಲಕ ಅಧರ್ಮದ ವಿರುದ್ಧ ಎಲ್ಲರೂ ಒಟ್ಟಾಗಿ ಹೊರಾಡಬೇಕು ಎಂದು ಜಗತ್ತಿಗೆ ಸಾರಿದ್ದಾನೆ.
ಆ ತತ್ವವನ್ನು ಜಿವನದಲ್ಲಿ ಅಳವಡಿಸಿಕೊಳ್ಳಬೇಕು. ಶ್ರೀಕೃಷ್ಣ ಜೀವನೂತ್ಸಾಹದ ಸಂಕೆತ. ಆತನ ಪ್ರಭುದ್ದತೆ, ಮುತ್ಸದಿತನ ಎಲ್ಲಾ ಕಾಲಗಟ್ಟಕ್ಕು ಮಾದರಿಯಾಗಿ ನಿಲ್ಲುತ್ತದೆ. ಭಗವಾನ ಶ್ರೀ ಕೃಷ್ಣನ ವ್ಯಕ್ತಿತ್ವ ಅದ್ಭುತವಾದದ್ದು. ಆತನ ಜೀವನದ ಪ್ರತಿ ಘಟನೆಯೂ ಅನುಸರಣೀಯವಾದದು. ಅದಕ್ಕಾಗಿಯೇ ಮಾನವನು ಸಾವಿರಾರು ವರ್ಷಗಳಿಂದ ಕೃಷ್ಣನ ನಡೆ-ನುಡಿಗಳನ್ನು ಅನುಸರಿಸುತ್ತಾ ಬಂದಿದ್ದಾನೆ. ಆತನ ಬಾಲ್ಯ ಲೀಲೆಗಳಿಂದ ಇಂದಿಗೂ ಸಹ ನಮ್ಮ ಜೀವನದ ಅನೇಕ ಸಮಸ್ಯೆಗಳಿಗೆ ಸಮಾಧಾನವನ್ನು ಸೂಚಿಸುತ್ತವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉತ್ತಮ ಶಿಕ್ಷಕಿಯರಾದ ಅಶ್ವಿನಿ, ಶಿವಾನಿ, ಭಾಗ್ಯಶ್ರೀ ವಾಯ್, ತಾಯಮ್ಮ, ಭಾಗ್ಯಶ್ರೀ ಪಾಟೀಲ್, ಶರಣಮ್ಮ, ಮೆಹಜಬಿನ್, ರೇಷ್ಮಾ, ರೇಣುಕಾ, ಶಿಕ್ಷಕರಾದ ಶರಣಗೌಡ, ಶಿವರಾಜ್, ಮಹಾಂತೇಶ ಸೇರಿ ಮುಂತಾದವರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…