ಸುರಪುರ: ತಾಲೂಕಿನ ಕಕ್ಕೇರಾ ಭಾಗದ ಗ್ರಾಮಗಳಿಗೆ ಸರಿಯಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ,ಆದ್ದರಿಂದ ಸಂಬಂಧಿಸಿರುವ ಜೆ.ಇ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸೇನೆ ವತಿಯಿಂದ ನಗರದ ರಂಗಂಪೇಟೆಯ ಜೆಸ್ಕಾಂ ಕಚೇರಿ ಎಇಇ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಕಕ್ಕೇರಾ ಪಟ್ಟಣದ 33 ಕೆ.ಬಿ ವ್ಯಾಪ್ತಿಯಲ್ಲಿನ ಹುಣಸಿಹೊಳೆ,ಬಂಡೊಳ್ಳಿ,ಲಿಂಗದಳ್ಳಿ ಎಸ್.ಹೆಚ್ ಸೇರಿ ಅನೇಕ ದೊಡ್ಡಿಗಳಿಗೆ ಜೆ.ಇ ಉಮೇಶ ಅವರು ಸರಿಯಾಗಿ ವಿದ್ಯುತ್ ಸರಬರಾಜು ಮಾಡದೆ,ನಿರಂತರ ಜ್ಯೋತಿ ಪಂಪಸೆಟ್‍ದಾರರಿಂದ ಲಂಚ ಪಡೆದು ಅವರಿಗೆ ನಿರಂತರ ವಿದ್ಯುತ್ ನೀಡಿ ಗ್ರಾಮಗಳಿಗೆ ವಂಚನೆ ಮಾಡುತ್ತಿದ್ದಾರೆ.ಆದ್ದರಿಂದ ಜೆ.ಇ ಉಮೇಶ ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಕಕ್ಕೇರಾ ಭಾಗದ ಎಲ್ಲಾ ಗ್ರಾಮಗಳಿಗೆ ಸರಿಯಾಗಿ ವಿದ್ಯುತ್ ನೀಡಬೇಕು,ಇಲ್ಲವಾದಲ್ಲಿ ನಮ್ಮ ದಲಿತ ಸೇನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಎಇಇ ಅಶೋಕ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಹುಲಗಪ್ಪ ದೇವತ್ಕಲ್,ತಾಲೂಕು ಅಧ್ಯಕ್ಷ ಮರಿಲಿಂಗ ಗುಡಿಮನಿ,ಮುಖಂಡರಾದ ಭೀಮಾಶಂಕರ ಬಡಿಗೇರ,ಬಸವರಾಜ ಮಾಳಳ್ಳಿಕರ್,ಶರಣು ಅಂಬರಕೇಡ,ಮೌನೇಶ,ಬಸವರಾಜ ಮಂಗಳೂರು,ಭೀಮರಾಯ ಮುಷ್ಠಳ್ಳಿ,ಯಲ್ಲಪ್ಪ ಭಾವಿಮನಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…