ಸುರಪುರ: ನಗರದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕು ಆಡಳಿತ ದಿಂದ ಶ್ರೀಕೃಷ್ಣ ಜಯಂತಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ತಹಸೀಲ್ದಾರ್ ವಿಜಯಕುಮಾರ ಕೆ ಅವರು ಶ್ರೀಕೃಷ್ಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಆರತಿ ಬೆಳಗಿ ವಂದಿಸಿದರು.
ಈ ಸಂದರ್ಭದಲ್ಲಿ ಯಾದವ ಸಮುದಾಯದ ಅನೇಕ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ ಶ್ರೀಕೃಷ್ಣ ಭಾವಚಿತ್ರಕ್ಕೆ ನಮಿಸುವ ಜೊತೆಗೆ ತಹಸೀಲ್ದಾರರು ನೂತನವಾಗಿ ಆಗಮಿಸಿದ್ದರಿಂದ ಯಾದವ ಸಮುದಾಯದ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರಕಾಶ ಯಾದವ್,ರಾಜೇಂದ್ರ ಯಾದವ್,ಯಾದವ ಸಮಾಜದ ತಾಲೂಕು ಅಧ್ಯಕ್ಷ ರಮೇಶ ಯಾದವ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಯಾದವ ಸಮುದಾಯ ಮುಖಂಡರು ಹಾಗೂ ಶ್ರೀಕೃಷ್ಣರ ಅನುಯಾಯಿಗಳು ಭಾಗವಹಿಸಿದ್ದರು.