ಬೆಂಗಳೂರು, ಸೆ.7; ಸುಗಮ ಸಂಗೀತ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆಯಾಗಿರುವ ಬೆಂಗಳೂರಿನ ಆದರ್ಶ ಸುಗಮ ಸಂಗೀತ ಅಕಾಡೆಮಿಯು 2023 ನೇ ಸಾಲಿನ ರಾಜ್ಯಮಟ್ಟದ ಪ್ರತಿಷ್ಠಿತ `ಕನ್ನಡ ನಿತ್ಯೋತ್ಸವ ಪ್ರಶಸ್ತಿ’ಯನ್ನು ಪ್ರಕಟಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕದ ಕಲಬುರಗಿಯ ಕವಿ, ಲೇಖಕರಾದ ಮಹಿಪಾಲರೆಡ್ಡಿ ಮುನ್ನೂರ್, ಖ್ಯಾತ ಗಾಯಕಿ ಶಶಿಕಲಾ ಸುನೀಲ್, ಪ್ರತಿಷ್ಠಿತ ಸಂಸ್ಥೆ ವೀಣಾ ಮ್ಯೂಸಿಕಲ್ನ ಮಾಲೀಕರಾದ ಪಿ.ನಾಗರಾಜ್, ಕನ್ನಡ ಕಾರ್ಯಕರ್ತ, ಸಂಘಟಕ ಜಾವಗಲ್ ಪ್ರಸನ್ನಕುಮಾರ, ರಂಗಕರ್ಮಿ, ನಟ ಬೆಳ್ಳಿಚುಕ್ಕಿ ವೀರೇಂದ್ರ ಅವರುಗಳಿಗೆ ಕನ್ನಡ ನಿತ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಉದಯಭಾನು ಕಲಾ ಸಂಘದಲ್ಲಿ ಸೆ.10 ರಂದು ಸಂಜೆ 6 ಕ್ಕೆ ಆಯೋಜಿಸಲಾಗಿದೆ. ಮಾಜಿ ವಿಧಾನಸಭಾಧ್ಯಕ್ಷರಾದ ಪ್ರೊ.ಬಿ.ಕೆ.ಚಂದ್ರಶೇಖರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಅಕಾಡೆಮಿ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು. ಬಸವನಗುಡಿ ಶಾಸಕರಾದದ ಎಲ್.ಎ.ರವಿ ಸುಬ್ರಮಣ್ಯ ಅವರು ಪ್ರಶಸ್ತಿ ಪ್ರದಾನ ಮಾಡುವರು.
ಹಿರಿಯ ಸಾಹಿತಿ ಮತ್ತು ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಭೈರಮಂಗಲ ರಾಮೇಗೌಡ ಅವರು ಸಮಾರೋಪ ನುಡಿಗಳಾಡುವರು. ನಾಡಿನ ಖ್ಯಾತ ಕಲಾವಿದರಿಂದ ಸುಗಮ ಸಂಗೀತ ಗಾಯನ, ಹೆಚ್.ಬಿ.ಜಯರಾಂ, ರಾಘವೇಂದ್ರ ಜೋಶಿ, ಜೈಕುಮಾರ ತಂಡದವರಿಂದ ವಾದ್ಯ ವೈಭವ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…