ಬಿಸಿ ಬಿಸಿ ಸುದ್ದಿ

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಂಗವಿಕಲ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ಕಲಬುರಗಿ: ಗೌರವಧನ ಆಧಾರದಲ್ಲಿ ಕಾರ್ಯಾನಿರ್ಹಿಸುತ್ತಿರುವ ಅಂಗವಿಕಲ ಸಿಬ್ಬಂದಿಗಳಿಗೆ ಕೆಲವರು ಪ್ರಭಾವ ಬಳಿಸಿಕೊಂಡು ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿಷ ಸೇವೆಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆಸಿದೆ.

ಅಫಜಲಪೂರ ತಾಲ್ಲೂಕಿನ ಉಡಚಣ ಗ್ರಾಮದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಣ್ಣವೀರಪ್ಪ ಗೌಡಗಾಂವ ಆತ್ಮಹತ್ಯೆಗೆ ಯತ್ನಿಸಿರುವ ಕಾರ್ಯಾಕರ್ತ. ಕೆಲವು ದಿನಗಳಿಂದ ನಿರಂತರವಾಗಿ ತನ್ನ ಗೌರವಧನದಲ್ಲಿ ಆಯ್ಕೆಗೊಂಡಿರುವ ಬಗ್ಗೆ ಅಸಮಧಾನಕ್ಕೆ ಒಳಗಾಗಿ ತನ್ನ ವಿರುದ್ಧ ನಿರಂತರ ಒಂದಲ್ಲ ಒಂದು ರೀತಿಯಲ್ಲಿ ಇಲಾಖೆಗೆ ಮತ್ತು ಆಯ್ಕೆಗೆ ಸಂಬಂಧಿಸಿದಂತೆ ಪೀಡುಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕುರುಕುಳ ನೀಡುತ್ತಿರುವ ವ್ಯಕ್ತಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗೆ ಭೇಟಿ ಮನವಿ ಸಲ್ಲಿಸಲು ತೆರಳುತ್ತಿದ ವೇಳೆ ಮಾನಸಿಕವಾಗಿ ಮನನೊಂದು ಜಿಲ್ಲಾಧಿಕಾರಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಈ ವೇಳೆ ಸ್ಥಳೀಯ ಪೊಲೀಸರು ಧಾವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಣವೀರ್ ನನ್ನು ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ಕಿರುಕುಳ ನೀಡಿರುವ ವ್ಯಕ್ತಿಗಳ ವಿರುದ್ಧ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

emedialine

Recent Posts

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

3 mins ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

2 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

2 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

4 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

4 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

4 hours ago