ಸಾಮಾಜಿಕ ಪರಿವರ್ತನೆಯ ಹರಿಕಾರ ನಾರಾಯಣಗುರು

0
27

ಕಲಬುರಗಿ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಉತ್ತಮ ಹಾಗೂ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಲಿಂಗಪ್ಪ ಕಿನ್ನೂರ್ ಅಭಿಪ್ರಾಯಪಟ್ಟರು.

ನಗರದ ರಾಷ್ಟ್ರೀಯ ಸಮಾಜ ಪಕ್ಷ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಪುರಾತನ ಕಾಲದಿಂದಲೂ ಹಲವಾರು ತಳ ಸಮುದಾಯದವರು ನಿರಂತರ ಶೋಷಣೆಗೆ ಒಳಗಾಗಿದ್ದರು. ಶೋಷಣೆಯ ವಿರುದ್ಧ ಬಲವಾದ ದನಿ ಎತ್ತಿ ಹಾಗೂ ಸಮಾಜದಲ್ಲಿ ಬದಲಾವಣೆ ತರುವಲ್ಲಿ ನಾರಾಯಣಗುರುಗಳ ಪಾತ್ರ ಬಹು ಮುಖ್ಯ ಪಾತ್ರ ವಹಿಸಿ ಅವರು ಶ್ರಮಿಸಿದವರು.
ನಾರಾಯಣಗುರುಗಳು ಮೂಢನಂಬಿಕೆ, ಜಾತೀಯತೆ, ಅಸ್ಪೃಶ್ಯತೆ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ, ಬಾಲ್ಯವಿವಾಹ, ಗುಲಾಮಗಿರಿ, ಜೀತ ಪದ್ಧತಿ, ಜಮೀನ್ದಾರಿ ಪದ್ಧತಿ ಹಾಗೂ ಮೊದಲಾದ ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ಶ್ರಮಿಸಿದ್ದರು ಎಂದರು.

ಮೇಲ್ವರ್ಗದವರಿಂದ ತುಳಿತಕ್ಕೊಳಗಾದ ಎಲ್ಲಾ ಸಮುದಾಯಗಳನ್ನು ಎತ್ತಿ ಹಿಡಿಯುವ ಕೆಲಸ ರಾಷ್ಟ್ರೀಯ ಸಮಾಜ ಪಕ್ಷ ಮುಂದಿನ ದಿನಗಳಲ್ಲಿ ಮಾಡಬೇಕು ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಸಮಾಜ ಪಕ್ಷದ ರಾಜ್ಯಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ದೊಡ್ಮನಿ, ರಾಜ್ಯ ಕಾರ್ಯದರ್ಶಿಬಸವರಾಜ ರಾವೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮಂತ ಮಾವನೂರ, ಬಸವರಾಜ ಮುಕ್ಕ, ರಮೇಶ ಶಹಾಬಾದ್, ಶಿವು ಪಾಟೀಲ್ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here