ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ
ಕಲಬುರಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದನಂತರ ರಾಜ್ಯದಲ್ಲಿ ಬರ ಆವರಿಸಿದ್ದು,ಇಲ್ಲಿವರೆಗೂ ಮಳೆಯ ಅಭಾವದಿಂದ ಬೆಳೆ ಕೈಗೆ ಬಾರದೆ ರಾಜ್ಯದಲ್ಲಿ ಸುಮಾರು 42 ಜನ ರೈತರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಬಿಜೆಪಿ ನಗರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ್ ಪಾಟೀಲ್ ತಿಳಿಸಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಮೋರ್ಚಾ ಮಹಾನಗರ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಳೆಯ ಅಭಾವದಿಂದ ಉಂಟಾಗಿರುವ ಬರದ ಸಮಸ್ಯೆ,ವಿದ್ಯುತ್ ಅಭಾವದಿಂದ ರೈತರ ಪಂಪ್ ಸೆಟ್,ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್, ರೈತಪರ ಯೋಜನೆಗಳು ರದ್ದು ಮಾಡಿ,ರಾಜ್ಯ ಸರ್ಕಾರ ಸಂಪೂರ್ಣ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದರು.
ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಮಾತನಾಡಿ,ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಆವರಿಸಿದೆ. ಜಲಾಶಯಗಳ ನೀರಿನ ಮಟ್ಟ ಕುಸಿದು ಹೋಗಿದೆ.ಇದರಿಂದ ರೈತರ ಜಮೀನುಗಳಿಗೆ,ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗುತ್ತಿದೆ.ಈಗಾಗಲೇ ರೈತರು 80% ಬೆಳೆಗಳ ಬಿತ್ತನೆ ಮಾಡಿದ್ದು,ಮಳೆಯ ಅಭಾವದಿಂದ ರೈತರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ ಎಂದರು.
ಕೂಡಲೇ ಮೇಲಿನ ವಿಷಯಗಳ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು,ಸಂಬಂಧ ಪಟ್ಟ ಸಚಿವರು ಗಮನ ಹರಿಸುವ ಮೂಲಕ ತಕ್ಷಣ ರೈತರ ಸಹಾಯಕ್ಕೆ ಬರಬೇಕೆಂದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸಕಾ9ರಕ್ಕೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಉಪ ಮೇಯರ್ ಶಿವಾನಂದ ಪಿಸ್ತಿ, ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಭಿಮಾಶಂಕರ ಯಳಮೇಲಿ, ಮಹಾದೇವ ಬೆಳಮಗಿ, ದಯಾನಂದ ಧಾರವಾಡಕರ್, ರಾಜೇಂದ್ರ ಕರೇಕಲ್, ಗಿರಿರಾಜ್ ಯಳಮೇಲಿ, ರಾಚಣ್ಣಾ ಪಟ್ಟಣ,ಸೂಯ9ಕಾಂತ್ ಡೆಂಗಿ, ಮಲ್ಲಿಕಾರ್ಜುನ ಇಟಗಿ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.