ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ

0
24

ಶಹಾಬಾದ: ನಗರದ ನೆಹರು ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ಬಿಜೆಪಿ-ರೈತ ಮೋರ್ಚಾ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ ಗುರುರಾಜ ಸಂಗಾವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಬಸವರಾಜ ಮದ್ರಿಕಿ, ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳು ಕಳೆದರೂ ಅಭಿವೃದ್ಧಿ ಯೋಜನೆಗಳ ಬಗ್ಗೆ ಚಿಂತಿಸುತ್ತಿಲ್ಲ. ಏತನ್ಮಧ್ಯೆ ರಾಜ್ಯಾದ್ಯಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್‍ನಲ್ಲಿ ಅನ್ನದಾತರಿಗೆ ಪೂರಕವಾಗುವ ಒಂದಾದರೂ ಯೋಜನೆ ಘೋಷಣೆ ಮಾಡಿಲ್ಲ ಎಂದು ಆರೋಪಿಸಿದರು.

Contact Your\'s Advertisement; 9902492681

ಹಿಂದಿನ ಬಿಜೆಪಿ ಸರ್ಕಾರ ವಿದ್ಯಾನಿಧಿ ಯೋಜನೆ ರೂಪಿಸಿ 11 ಲಕ್ಷ ರೈತ ಕುಟುಂಬದ ಮಕ್ಕಳಿಗೆ ಸುಮಾರು 500 ಕೋಟಿ ರೂ. ಮೀಸಲಿಟ್ಟಿತು. ಕಾಂಗ್ರೆಸ್ ಸರ್ಕಾರ ಬಂದ ನಂತರ ಕಿಸಾನ್ ಸಮ್ಮಾನ್ ಯೋಜನೆ ಹಿಂಪಡೆದು, ವಿದ್ಯಾನಿಧಿ ಯೋಜನೆ ಸ್ಥಗಿತಗೊಳಿಸಿತು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಮ್ಮಾನ್ ಯೋಜನೆಗೆ ಈ ಹಿಂದೆ ರಾಜ್ಯ ಸರ್ಕಾರ ಸಹ 4 ಸಾವಿರ ರೂ.ನೀಡಿ, ರೈತರ ಖಾತೆಗೆ ಡಿಬಿಟಿ ಮೂಲಕ ಒಟ್ಟು 10 ಸಾವಿರ ರೂ.ಜಮೆ ಮಾಡುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಈ ಯೋಜನೆ ಸ್ಥಗಿತಗೊಳಿಸಿದೆ. ಅಲ್ಲದೆ, ಭೂಸಿರಿ, ರೈತ ವಿದ್ಯಾನಿಧಿ ಮತ್ತು ಜಿಲ್ಲೆಗೊಂದು ಗೋಶಾಲೆ ಸ್ಥಾಪನೆಯ ಹಿಂದಿನ ಸರ್ಕಾರದ ಪ್ರಸ್ತಾವನೆಗಳಿಗೆ ತಡೆ ಹೇರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತಾಪಿ ವರ್ಗದ ಸಮಸ್ಯೆಗಳನ್ನು ಆಲಿಸದೇ ನಿರ್ಲಕ್ಷ್ಯ ಮಾಡುತ್ತಿದೆ, ಐದು ಗ್ಯಾರಂಟಿಗಳನ್ನು ಅನುμÁ್ಠನಕ್ಕೆ ತರುವ ನೆಪದಲ್ಲಿ ರೈತರ, ಮಹಿಳೆಯರ ಹಾಗೂ ಕೃಷಿ ಕಾರ್ಮಿಕರ ಹಿತ ಕಾಪಾಡುವುದನ್ನು ಮರೆತಿದೆ.
ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಹಗೆತನ ಸಾಧಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿ ಯೋಜನೆಗಳಿಗೆ ಈ ಸರ್ಕಾರ ಸ್ಪಂದಿಸುತ್ತಿಲ್ಲ. ಇದರಿಂದ ಜನತೆ ಹೈರಾಣಾಗುವಂತಾಗಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಬಿಜೆಪಿ-ರೈತ ಮೋರ್ಚಾ ಅಧ್ಯಕ್ಷ ಸಂತೋಷ ಪಾಟೀಲ,ಮುಖಂಡರಾದ ಕನಕಪ್ಪ ದಂಡಗುಲಕರ್, ನಾಗರಾಜ ಮೇಲಗಿರಿ, ಚಂದ್ರಕಾಂತ ಗೊಬ್ಬೂರಕರ್,ಮಹಾದೇವ ಗೊಬ್ಬೂರಕರ್,ಬಸವರಾಜ ಬಿರಾದಾರ,ದಿನೇಶ ಗೌಳಿ, ಜಗದೇವ ಸುಬೇದಾರ,ಯಲ್ಲಪ್ಪ ದಂಡಗುಲಕರ್, ಸದಾನಂದ ಕುಂಬಾರ,ಡಿ.ಸಿ.ಹೊಸಮನಿ,ರಾಜು ಕೋಬಾಳ,ರಾಜು ಕುಂಬಾರ,ದತ್ತು ಗಂಟಿ,ಸಂಜಯ ವಿಠಕರ್, ಶರಣು ಕೊಡದೂರ್,ಸಂತೋಷ ಹುಲಿ, ಮೋಹನ ಹಳ್ಳಿ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here