ಶಹಾಬಾದ: ನಗರದ ನೆಹರು ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ಬಿಜೆಪಿ-ರೈತ ಮೋರ್ಚಾ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ ಗುರುರಾಜ ಸಂಗಾವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಬಸವರಾಜ ಮದ್ರಿಕಿ, ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳು ಕಳೆದರೂ ಅಭಿವೃದ್ಧಿ ಯೋಜನೆಗಳ ಬಗ್ಗೆ ಚಿಂತಿಸುತ್ತಿಲ್ಲ. ಏತನ್ಮಧ್ಯೆ ರಾಜ್ಯಾದ್ಯಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್‍ನಲ್ಲಿ ಅನ್ನದಾತರಿಗೆ ಪೂರಕವಾಗುವ ಒಂದಾದರೂ ಯೋಜನೆ ಘೋಷಣೆ ಮಾಡಿಲ್ಲ ಎಂದು ಆರೋಪಿಸಿದರು.
ಹಿಂದಿನ ಬಿಜೆಪಿ ಸರ್ಕಾರ ವಿದ್ಯಾನಿಧಿ ಯೋಜನೆ ರೂಪಿಸಿ 11 ಲಕ್ಷ ರೈತ ಕುಟುಂಬದ ಮಕ್ಕಳಿಗೆ ಸುಮಾರು 500 ಕೋಟಿ ರೂ. ಮೀಸಲಿಟ್ಟಿತು. ಕಾಂಗ್ರೆಸ್ ಸರ್ಕಾರ ಬಂದ ನಂತರ ಕಿಸಾನ್ ಸಮ್ಮಾನ್ ಯೋಜನೆ ಹಿಂಪಡೆದು, ವಿದ್ಯಾನಿಧಿ ಯೋಜನೆ ಸ್ಥಗಿತಗೊಳಿಸಿತು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಮ್ಮಾನ್ ಯೋಜನೆಗೆ ಈ ಹಿಂದೆ ರಾಜ್ಯ ಸರ್ಕಾರ ಸಹ 4 ಸಾವಿರ ರೂ.ನೀಡಿ, ರೈತರ ಖಾತೆಗೆ ಡಿಬಿಟಿ ಮೂಲಕ ಒಟ್ಟು 10 ಸಾವಿರ ರೂ.ಜಮೆ ಮಾಡುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಈ ಯೋಜನೆ ಸ್ಥಗಿತಗೊಳಿಸಿದೆ. ಅಲ್ಲದೆ, ಭೂಸಿರಿ, ರೈತ ವಿದ್ಯಾನಿಧಿ ಮತ್ತು ಜಿಲ್ಲೆಗೊಂದು ಗೋಶಾಲೆ ಸ್ಥಾಪನೆಯ ಹಿಂದಿನ ಸರ್ಕಾರದ ಪ್ರಸ್ತಾವನೆಗಳಿಗೆ ತಡೆ ಹೇರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತಾಪಿ ವರ್ಗದ ಸಮಸ್ಯೆಗಳನ್ನು ಆಲಿಸದೇ ನಿರ್ಲಕ್ಷ್ಯ ಮಾಡುತ್ತಿದೆ, ಐದು ಗ್ಯಾರಂಟಿಗಳನ್ನು ಅನುμÁ್ಠನಕ್ಕೆ ತರುವ ನೆಪದಲ್ಲಿ ರೈತರ, ಮಹಿಳೆಯರ ಹಾಗೂ ಕೃಷಿ ಕಾರ್ಮಿಕರ ಹಿತ ಕಾಪಾಡುವುದನ್ನು ಮರೆತಿದೆ.
ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಹಗೆತನ ಸಾಧಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿ ಯೋಜನೆಗಳಿಗೆ ಈ ಸರ್ಕಾರ ಸ್ಪಂದಿಸುತ್ತಿಲ್ಲ. ಇದರಿಂದ ಜನತೆ ಹೈರಾಣಾಗುವಂತಾಗಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಬಿಜೆಪಿ-ರೈತ ಮೋರ್ಚಾ ಅಧ್ಯಕ್ಷ ಸಂತೋಷ ಪಾಟೀಲ,ಮುಖಂಡರಾದ ಕನಕಪ್ಪ ದಂಡಗುಲಕರ್, ನಾಗರಾಜ ಮೇಲಗಿರಿ, ಚಂದ್ರಕಾಂತ ಗೊಬ್ಬೂರಕರ್,ಮಹಾದೇವ ಗೊಬ್ಬೂರಕರ್,ಬಸವರಾಜ ಬಿರಾದಾರ,ದಿನೇಶ ಗೌಳಿ, ಜಗದೇವ ಸುಬೇದಾರ,ಯಲ್ಲಪ್ಪ ದಂಡಗುಲಕರ್, ಸದಾನಂದ ಕುಂಬಾರ,ಡಿ.ಸಿ.ಹೊಸಮನಿ,ರಾಜು ಕೋಬಾಳ,ರಾಜು ಕುಂಬಾರ,ದತ್ತು ಗಂಟಿ,ಸಂಜಯ ವಿಠಕರ್, ಶರಣು ಕೊಡದೂರ್,ಸಂತೋಷ ಹುಲಿ, ಮೋಹನ ಹಳ್ಳಿ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…