ಕಲಬುರಗಿ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ ಬ್ರಹ್ಮಪೂರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆಗಳನ್ನು ಮಹಾದೇವಿ ಕನ್ಯಾ ಪ್ರೌಢ ಶಾಲೆಯಲ್ಲಿ ಏರ್ಪಡಿಸಲಾಗಿತ್ತು. ಈ ಪ್ರತಿಭಾ ಕಾರಂಜಿಯಲ್ಲಿ ಎಸ್.ಬಿ.ಆರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕಥೆ ಹೇಳುವುದು, ಛದ್ಮವೇಷ, ಕ್ಲೇ ಮಾಡೆಲ್, ಕಂಠಪಾಠ, ಧಾರ್ಮಿಕ ಪಠಣ, ಲಘುನ ಸಂಗೀತ, ಆಶುಭಾಷಣ ಹೀಗೆ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದುಕೊಂಡು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಈ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ವಿದ್ಯಾಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರು ಹಾಗೂ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಣಿ ಅವ್ವಜಿ ಹಾಗೂ 9ನೇ ಪೀಠಾಧಿಪತಿಗಳಾದ ಪೂಜ್ಯ ಚಿ. ದೊಡ್ಡಪ್ಪ ಅಪ್ಪ ಅವರು ಹರ್ಷ ವ್ಯಕ್ತಪಡಿಸಿ ಆಶೀರ್ವದಿಸಿದ್ದಾರೆ. ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ. ಬಸವರಾಜ ದೇಶಮುಖ ಅವರು ಹಾಗೂ ಶಾಲೆಯ ಪ್ರಾಚಾರ್ಯರಾದ ಎನ್.ಎಸ್. ದೇವರಕಲ್ ಅವರು ಅಭಿನಂದಿಸಿದ್ದಾರೆ. ಮಕ್ಕಳ ಈ ಸಾಧನೆಗೆ ಶಾಲೆಯ ಎಲ್ಲ ಶಿಕ್ಷಕರು ಹರ್ಷ ವ್ಯಕ್ತಪಡಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…