ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕ ಉತ್ಸವ ಅರ್ಥಪೂರ್ಣ ಆಚರಣೆಯಾಗಲಿ

ಕಲಬುರಗಿ: ಸೆ.17 ರಂದು ನಡೆಯುವ 75ನೇ ವರ್ಷದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅದ್ದೂರಿಯಾಗಿ ಆಚರಣೆವಾಗಬೇಕು. ಈ ಭಾಗದಲ್ಲಿರುವ ಐತಿಹಾಸಿಕ ಕೋಟೆಗಳಿಗೆ ದೀಪಾಲಂಕಾರಗೊಳ್ಳಬೇಕು. ಅಲ್ಲದೇ ಕಲಬುರಗಿ ನಗರದಲ್ಲಿ ಹಬ್ಬದ ವಾತಾವಾರಣ ಸೃಷ್ಟಿಸಬೇಕು ಎಂದು ಒತ್ತಾಯಿಸಿ ಸೆ. 11ರಂದು ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟದ ನಿಯೋಗವು ಡಿಸಿ ಹಾಗೂ ಕೆಕೆಆರ್‍ಡಿಬಿ ಅಧ್ಯಕ್ಷರಿಗೆ ಭೇಟಿ ನೀಡಿ ಚರ್ಚಿಸಲಾಗುವುದು ಎಂದು ಒಕ್ಕೂಟದ ಸಂಚಾಲಕ  ಮಂಜುನಾಥ ನಾಲವಾರಕರ್ ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ 75ನೇ ವರ್ಷದ ಕಲ್ಯಾಣ ಕರ್ನಾಟಕ ಉತ್ಸವು ಆಚರಣೆ ಮಾಡುತ್ತಿದ್ದು, ಅಲ್ಲದೇ ಕಲ್ಯಾಣ ಕರ್ನಾಟಕ ಭಾಗವು ಸಂವಿಧಾನ 371(ಜೆ)  ತಿದ್ದುಪಡೆಗೊಂಡು 10 ವರ್ಷದ ಸಂಭ್ರಮ ಆಚರಣೆ ಆಯೋಜಿಸುತ್ತಿದ್ದು ಒಕ್ಕೂಟ ಸ್ವಾಗತಿಸುತ್ತದೆ. ಈ ಉತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಹ್ವಾನಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಲ್ಯಾಣ ಕರ್ನಾಟಕ ಇತಿಹಾಸ ಸಮಿತಿ ರಚಿಸಿ ಈ ಭಾಗದಲ್ಲಿರುವ ತಜ್ಞರು, ಹಿರಿಯ ಪತ್ರಕರ್ತರು, ಸಾಹಿತಿಗಳು, ಉಪನ್ಯಾಸಕರ ಒಳಗೊಂಡತೆ ಸಮಿತಿಯನ್ನು ರಚಿಸಿ 1 ವರ್ಷದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಇತಿಹಾಸವನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿ ಮುಂದಿನ ಪೀಳಿಗೆಗೆ ನಮ್ಮ ಭಾಗದ ಇತಿಹಾಸ ಪಠ್ಯ ಪುಸ್ತಕ ಮುದ್ರಣಕ್ಕೆ ಮುಂದಾಗಬೇಕು. ನಗರದ ಪಟೇಲ್ ವೃತ್ತವನ್ನು ಅಭಿವೃದ್ಧಿಗಾಗಿ ಕಳೆದ ಕೆಕೆಆರ್‍ಡಿಬಿಯಿಂದ ಈಗಾಗಲೇ  ಡಾ. ಬಿ.ಆರ್.ಅಂಬೇಡ್ಕರ್, ವಚನಕಾರ ಬಸವಣ್ಣ, ಡಾ. ಬಾಬೂ ಜಗಜೀವನರಾಂ ಪ್ರತಿಮೆ ಸುತ್ತಮುತ್ತಲು ಅಭಿವೃದ್ಧಿಗೆ ಮಂಡಳಿಯಿಂದ ಹಣ ಬಿಡುಗಡೆ ಮಾಡಲಾಗಿದ್ದು, ಈಗಲೇ ಅಭಿವೃದ್ಧಿ ಕಾರ್ಯಚಟುವಟಿಕೆ ಪ್ರಗತಿಯಲ್ಲಿದ್ದು, ಆದರೆ, ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತವು ಅಭಿವೃದ್ಧಿಯಾಗಬೇಕು. ಕಲ್ಯಾಣ ಕರ್ನಾಟಕ ಉತ್ಸವದ ಬಗ್ಗೆ ಶಾಲಾ ಕಾಲೇಜಿನಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕು ಎಂದು ಒತ್ತಾಯಿಸಿದರು.

ಸಚಿನ ಫರಹತಾಬಾದ್, ಮನೋಹ ಬೀರನೂರ, ಶರಣು ಹೊಸಮನಿ, ನಾಗರಾಜ ಸ್ವಾದಿ, ವಿ.ಎಚ್.ವಾಲಿಕಾರ್, ಸಿದ್ದು ಜಮಾದಾರ, ಮುತ್ತಣ್ಣ, ಪ್ರಲ್ಹಾದ್ ಹಡಗಿಲಕರ್, ಸಂತೋಷ ಚೌಧರಿ, ಆನಂದ ತೆಗನೂರ ಇತರರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

32 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

33 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

36 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago